ಲೇಖಕಿ ಶೋಭಾ ಟಿ. ತಪಶಿ ಅವರು ಮೂಲತಃ ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಲೋಳಸೂರ ಗ್ರಾಮದವರು. ಕೃಷಿ ಕುಟುಂಬದವರು. ಕನ್ನಡ ಎಂ.ಎ ಪದವೀಧರರು. ‘ಬೆಳಗಾವಿ ಜಿಲ್ಲೆಯ ಸ್ಥಳನಾಮಗಳು’ ವಿಷಯದಲ್ಲಿ ಡಾಕ್ಟರೇಟ್ ಪದವಿ ಪಡೆದಿದ್ದು, ರಾಜ್ಯ ಮಟ್ಟದ ವಿಚಾರ ಸಂಕಿರಣಗಳಲ್ಲಿ ಪ್ರಬಂಧ ಮಂಡಿಸಿದ್ದಾರೆ. ಹಲವಾರು ಸಂಘ ಸಂಸ್ಥೆಗಳಿಂದ ಸನ್ಮಾನಿತರು. ಪ್ರಸ್ತುತ ಹಾವೇರಿಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕನ್ನಡ ಉಪನ್ಯಾಸಕರು.