About the Author

ಕವಿ ಮನಸ್ಸಿನ ಯುವ ಪ್ರತಿಭೆ ಶ್ರುತಿ ಬಿ. ಆರ್. ಅವರು ಮೂಲತಃ ಚಿಕ್ಕಮಗಳೂರು ಜಿಲ್ಲೆ ತರೀಕೆರೆಯವರು. ಪ್ರಸ್ತುತ ಬೆಂಗಳೂರಿನಲ್ಲಿ ನೆಲೆಸಿರುವ ಅವರು ಕೆ.ಎ.ಎಸ್ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಮಾನಸ ಗಂಗೋತ್ರಿಯ ಮೈಸೂರು ವಿಶ್ವವಿದ್ಯಾನಿಲಯದಿಂದ ಪ್ರಥಮ ರ್‍ಯಾಂಕ್‌ ಮತ್ತು ಐದು ಚಿನ್ನದ ಪದಕಗಳೊಂದಿಗೆ ಅರ್ಥಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ, 2017 ರಲ್ಲಿ ಮೈಸೂರು ವಿಶ್ವವಿದ್ಯಾಲಯದಿಂದ ಅರ್ಥಶಾಸ್ತ್ರದಲ್ಲಿ ಪಿ.ಹೆಚ್.ಡಿ. ಪದವಿ ಪಡೆದಿದ್ದಾರೆ. ಅವರ ಹಲವಾರು ಲೇಖನಗಳು, ಕವಿತೆಗಳು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. 2008ರಲ್ಲಿ ಪ್ರಜಾವಣಿ ದೀಪಾವಳಿ ವಿಶೇಷಾಂಕದ ಕವನ ಸ್ಪರ್ಧೆಯ ವಿದ್ಯಾರ್ಥಿ ವಿಭಾಗದ ಬಹುಮಾನ ದೊರೆತಿದೆ.

ಶ್ರುತಿ ಬಿ. ಆರ್.

Stories/Poems