ಶುಭಶ್ರೀ ಭಟ್ಟ ಮೂಲತಃ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನವರು. ಪ್ರಸ್ತುತ ಶೃಂಗೇರಿಯಲ್ಲಿ ನೆಲೆಸಿರುವ ಇವರು ವೃತ್ತಿಯಲ್ಲಿ ಸಾಫ್ಟವೇರ್ ಇಂಜಿನೀಯರ್ ಆಗಿದ್ದಾರೆ.ಅಜ್ಜಿ-ಅಪ್ಪನಿಂದ ಬಂದ ಓದು ಬರಹದ ಆಸಕ್ತಿಯನ್ನು ಬೆಳೆಸಿಕೊಂಡು ಬಂದಿದ್ದಾರೆ. ರಾಜ್ಯದ ಅನೇಕ ದಿನಪತ್ರಿಕೆ, ವಾರಪತ್ರಿಕೆ, ಮಾಸಪತ್ರಿಕೆಯಲ್ಲಿ ಇವರ ಲೇಖನಗಳು, ಕಥೆಗಳು ಪ್ರಕಟಗೊಂಡಿವೆ. ಕೃಷ್ಣನ ಬಗ್ಗೆ ಅಪಾರ ಒಲವು ಹೊಂದಿದ್ದು,ಇತ್ತೀಚಿಗೆ ಗೋಕುಲ ದಿನಗಳನ್ನು ಮರುಸೃಷ್ಟಿಸುವ ಉದ್ದೇಶದಿಂದ ಕೃಷ್ಣ-ರಾಧೆಯ ಕುರಿತಾದ ಕನ್ನಡದ ಹಲವು ಭಾವಗೀತೆಗಳಿಗೆ ದೃಶ್ಯಕಾವ್ಯವನ್ನು ಕಟ್ಟಿಕೊಡುವ ಹೊಸ ಪ್ರಯತ್ನವಾಗಿ Tale Of Parijatha ಎಂಬ ತಮ್ಮದೇ ಯೂಟ್ಯೂಬ್ ಚಾನೆಲ್ ಕಟ್ಟಿಕೊಂಡು ಸಕ್ರಿಯರಾಗಿದ್ದಾರೆ.