ಸಿಬಂತಿ ಪದ್ಮನಾಭ ಕೆ. ವಿ. ದಕ್ಷಿಣಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕೊಕ್ಕಡ ಗ್ರಾಮದವರು. ಉಜಿರೆಯ ಎಸ್‌ಡಿಎಂ ಕಾಲೇಜಿನಲ್ಲಿ ಬಿಎ ವ್ಯಾಸಂಗ , ಆನಂತರ ಮಂಗಳೂರು ವಿಶ್ವವಿದ್ಯಾನಿಲಯದಿಂದ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಯುಜಿಸಿ ರಾಷ್ಟ್ರೀಯ ಅರ್ಹತಾ ಪರೀಕ್ಷೆಯಲ್ಲಿ ತೇರ್ಗಡೆಯೊಂದಿದ್ದು ಫೆಲೋಶಿಪ್‌ಗೆ ಆಯ್ಕೆಯಾಗಿ, 'ವಿಜಯ್ ಟೈಮ್' ಹಾಗೂ 'ಡೆಕ್ಕನ್ ಹೆರಾಲ್ಡ್' ದೈನಿಕಗಳಲ್ಲಿ ಪತ್ರಕರ್ತರಾಗಿದ್ದರು.
ಪ್ರಸ್ತುತ ತುಮಕೂರು ವಿಶ್ವವಿದ್ಯಾನಿಲಯದ ಘಟಕ ಸಂಸ್ಥೆ ವಿಶ್ವವಿದ್ಯಾನಿಲಯ ಕಲಾ ಕಾಲೇಜಿನಲ್ಲಿ ಪತ್ರಿಕೋದ್ಯಮ ಸಹಾಯಕ ಪ್ರಾಧ್ಯಾಪಕರಾಗಿದ್ದು, ರಾಷ್ಟ್ರೀಯ ಸಮ್ಮೇಳನಗಳಲ್ಲಿ ಸಂಶೋಧನ ಪ್ರಬಂಧಗಳನ್ನು ಮಂಡಿಸಿದ್ದಾರೆ. ಯಕ್ಷಗಾನ, ಸಾಹಿತ್ಯದಲ್ಲಿ ವಿಶೇಷ ಆಸಕ್ತಿ. “ಪೊರೆ ಕಳಚಿದ ಮೇಲೆ', 'ತುಮಕೂರು ಜಿಲ್ಲೆಯ ಪತ್ರಿಕೋದ್ಯಮ' ಮಾಧ್ಯಮ ಶೋಧ ಸೇರಿದಂತೆ ಹಲವು ಕೃತಿಗಳನ್ನು ರಚಿಸಿದ್ದಾರೆ.
ಲೇಖಕ, ಪ್ರಾಧ್ಯಾಪಕ, ಯಕ್ಷಗಾನ ಕಲಾವಿದ ಸಿಬಂತಿ ಪದ್ಮನಾಭ ಕೆ. ವಿ 'ಝೂಮ್ with ಬುಕ್ ಬ್ರಹ್ಮ' ಕಾರ್ಯಕ್ರಮದಲ್ಲಿ. ಹಿರಿಯ ಪತ್ರಕರ್ತ, ಲೇಖಕ ಸತೀಶ್ ಚಪ್ಪರಿಕೆ ಅವರು ನಡೆಸಿಕೊಡುವ ವಿಶೇಷ ಕಾರ್ಯಕ್ರಮ.