ಸೋಮೇಶ್ವರ ಗುರುಮಠ ಅವರು ಲೇಖಕ, ಕಿರುಚಿತ್ರ ನಿರ್ದೇಶಕ, ಹಾಡುಗಾರ, ಕವಿ, ನಿರೂಪಕ, ಅಂಕಣಗಾರ ಹಾಗೂ ನಟನಾಗಿ ಗುರುತಿಸಿಕೊಂಡವರು. ಈಗಾಗಲೇ 'ನಾನು ನನ್ನ ಜಗತ್ತು', 'ಪಯಣಿಗನ ಕಾವ್ಯಗಳು' ಮತ್ತು 'ಅನನ್ಯ ನಮನಗಳು' ಎಂಬ ಮೂರು ಕವನ ಸಂಕಲನಗಳನ್ನು ಹೊರತಂದಿದ್ದಾರೆ. ತಮ್ಮ ಬರವಣಿಗೆಯ ಮೂಲಕ ವಿಭಿನ್ನ ಛಾಪನ್ನು ಸಾಹಿತ್ಯ ಲೋಕದಲ್ಲಿ ಮೂಡಿಸಲು ಪ್ರಯತ್ನಿಸುತ್ತಿದ್ದಾರೆ.