ಸೂರಿಕುಮೇರು ಕೆ. ಗೋವಿಂದ ಭಟ್ ಅವರು ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕುಕ್ಕೆಮನೆಯವರು. 1938 ಮಾರ್ಚ್ 22ರಂದು ಜನಿಸಿದರು. 7ನೇ ತರಗತಿಯವರೆಗೆ ವಿದ್ಯಾಭ್ಯಾಸ ಪಡೆದಿರುವ ಅವರು 1951ಕ್ಕೆ ಮೇಳಕ್ಕೆ ಸೇರ್ಪಡೆಯಾಗುತ್ತಾರೆ. ನಾಟ್ಯವನ್ನು ಕುರಿಯ ವಿಠಲ ಶಾಸ್ತ್ರೀ, ಪರಮಶಿವನ್, ಮಾಧವ ಮೆನನ್, ರಾಜನ್ ಅಯ್ಯರ್ ಅವರಲ್ಲಿ ಕಲಿತು ಧರ್ಮಸ್ಥಳ, ಮೂಲ್ಕಿ, ಕೂಡ್ಲು, ಸುರತ್ಕಲ್ (ಕೆಳಗಿನ ಮಾರಿಗುಡಿ) ಇರಾ ಸೋಮನಾಥೇಶ್ವರ ಮೇಳಗಳಲ್ಲಿ ತಿರುಗಾಟ ನಡೆಸಿರುತ್ತಾರೆ. ಕೌರವ, ರಕ್ತಬೀಜ, ಇಂದ್ರಜಿತು ಮಾಗಧ, ಕರ್ಣ, ಅತಿಕಾಯ ನರಕಾಸುರ, ತಾಂಮ್ರಾಕ್ಷ ಕನಕಕಶಿಪು, ದೇವೇಂದ್ರ ಅರ್ಜುನ ಹನುಮಂತ, ಭೀಷ್ಮ ಬಾಹುಬಲಿ, ವಿಶ್ವಾಮಿತ್ರ ಅವರಿಗೆ ಹೆಸರು ತಂದು ಕೊಟ್ಟ ಪಾತ್ರಗಳಾಗಿವೆ.
ಕೃತಿಗಳು: ಎಪ್ಪತ್ತು ತಿರುಗಾಟಗಳು
ಪ್ರಶಸ್ತಿಗಳು ; ಕೇಂದ್ರ ಸಂಗೀತ ನಾಟಕ ಅಕಾಡೆಮಿ ಪುರಸ್ಕಾರ(2016), ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ(2008), ಕನ್ನಡ ಸಾಹಿತ್ಯ ಪರಿಷತ್ತು ಪುರಸ್ಕಾರ, ಕರ್ನಾಟಕ ಜಾನಪದ ಅಕಾಡೆಮಿ ಸಾಧನಾ ಪ್ರಶಸ್ತಿ.