ಲೇಖಕ ಶ್ರೀಪಾದ ನಾರಾಯಣ ಶೆಟ್ಟಿ ಅವರು ದಕ್ಷಿಣ ಕನ್ನಡ ಜಿಲ್ಲೆಯ ಮುಗ್ವಾ ಗ್ರಾಮದಲ್ಲಿ 1955 ಮೇ 14ರಂದು ಜನಿಸಿದರು. ವೃತ್ತಿಯಲ್ಲಿ ಅಧ್ಯಾಪಕರಾದ ಅವರು ಕವನ ರಚನೆಯಲ್ಲಿ ಅತೀವ ಆಸಕ್ತಿ ಹೊಂದಿದ್ದರು. ಅವರು ಹಲವಾರು ಬಂಡಾಯ ಸಮ್ಮೇಳನಗಳಲ್ಲಿ ಭಾಗವಹಿಸಿದ್ದಾರೆ.
ದಿನಕರ ದೇಸಾಯಿ-ಬದುಕು-ಬರಹ (ಮಹಾಪ್ರಬಂಧ), ಮೈತ್ರಿ, ಕಾವ್ಯ, ಕಾವ್ಯನಂದನ (ಕವನ ಸಂಗ್ರಹಗಳು), ಪ್ರಿಯಶರಾವತಿ, ಕಪ್ಪು ಜನರ ಕೆಂಪು ಕಾಶಿ (ಸಂಪಾದನೆ) ಮುಂತಾದ ಇಪ್ಪತ್ತಕ್ಕೂ ಹೆಚ್ಚು ಕೃತಿಗಳನ್ನು ಹೊರ ತಂದಿದ್ದಾರೆ.