ಕೊಡಗಿನಲ್ಲಿ ಜನಿಸಿದ ಸುಕನ್ಯಾ ಅವರು ವಿಜ್ಞಾನದಲ್ಲಿ ಪದವಿ, ಇಂಗ್ಲಿಷ್ ಸಾಹಿತ್ಯದಲ್ಲಿ ಸ್ನಾತಕೋತ್ತರ ಪದವಿ, ಎಂ.ಫಿಲ್ ಪಡೆದಿದ್ದಾರೆ. ಅನುವಾದ, ಮಹಿಳಾ ಸಾಹಿತ್ಯ, ಸಂಶೋಧನೆಯಲ್ಲಿ ಆಸಕ್ತಿ. ’ಅಲ್ಲಿಂದ ಇಲ್ಲಿಗೇ ಅವಳ ಕಥೆಗಳು’, ಅರುಂಧತಿ ರಾಯ್ ಅವರ ’ಡಿಸೆಂಬರ್ 13’, ಮಿಡತೆಗಳ ಬರವಿಗೆ ಕಿವಿಗೊಡುತ್ತಾ’ ಜೊತೆಗೆ ಮಿಲನ್ ಕುಂದೇರಾನ ಕಾದಂಬರಿ ’ಹೊರಲಾರದ ಗಾಳಿ ಭಾರ’ ಕನಾರಳ್ಳಿ ಅವರು ಅನುವಾದಿಸಿದ ಕೃತಿಗಳು. ವೈದೇಹಿ ಅವರ ಆಯ್ದ ಕತೆಗಳ ಇಂಗ್ಲಿಷ್ ಅನುವಾದ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಕಟಿಸಿದೆ. ಕನಾರಳ್ಳಿಯವರ ಹಲವು ಕಥೆ, ಅನುವಾದ, ಲೇಖನಗಳು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಸದ್ಯ ನ್ಯೂಜಿಲೆಂಡ್ ನಲ್ಲಿ ಇಂಗ್ಲಿಷ್ ಅಧ್ಯಾಪಿಕೆಯಾಗಿದ್ದಾರೆ.