ಪ್ರೊ. ಸುರೇಶ ಗುದಗನವರ ಅವರು ಬೆಳಗಾವಿ ಜಿಲ್ಲೆಯ ಚುಂಚನೂರ ಗ್ರಾಮದವರು. ರಾಮದುರ್ಗದ ವಿ.ಬಿ.ಎಸ್. ಎಸ್ ಪದವಿಪೂರ್ವ ಮಹಾವಿದ್ಯಾಲಯದಲ್ಲಿ ಸಂಖ್ಯಾಶಾಸ್ತ್ರ ಉಪನ್ಯಾಸಕರಾಗಿ ನಿವೃತ್ತರಾಗಿದ್ದಾರೆ. ಅನುಪಮ ಕಲಾ ಸಂಸ್ಥೆಯನ್ನು ಕಟ್ಟಿ ಗ್ರಾಮೀಣ ಪ್ರದೇಶದಲ್ಲಿ ಭರತನಾಟ್ಯದ ಅಭಿರುಚಿ ಬೆಳೆಸಲು ಹಂಬಲಿಸಿದವರು. ಕರ್ನಾಟಕ ಸರ್ಕಾರದ ಪದವಿಪೂರ್ವ ಶಿಕ್ಷಣ ಇಲಾಖೆಯ ದ್ವಿತೀಯ ಪಿ.ಯು.ಸಿ. ಪಠ್ಯಪುಸ್ತಕ ರಚನಾ ಮಂಡಳಿಯ ಸದಸ್ಯರಾಗಿದ್ದರು. ಕನ್ನಡ ಸಾಹಿತ್ಯ ಪರಿಷತ್ತಿನ ತಾಲೂಕಾ ಘಟಕದ ಅಧ್ಯಕ್ಷರಾಗಿ, ಲಯನ್ಸ್ ಸಂಸ್ಥೆಯ ಅಧ್ಯಕ್ಷರಾಗಿ, ಡಿ.ಎಸ್. ಕರ್ಕಿ ಸಾಹಿತ್ಯ ಸಂಘಟನೆಯ ಸಂಚಾಲಕರಾಗಿದ್ದು, ಇವರ ಬರಹಗಳು ನಾಡಿನ ಪ್ರಮುಖ ಪತ್ರಿಕೆಗಳಲ್ಲಿ ಪ್ರಕಟಗೊಂಡಿವೆ. ಅನುಪಮ ಪ್ರಕಾಶನ ಸಂಸ್ಥೆಯನ್ನು ಸ್ಥಾಪಿಸಿದ್ದಾರೆ.
ಕೃತಿಗಳು: ಅನುಪಮ ಸಾಧಕರು (60 ಮಹಿಳೆಯರ ಸಾಧನೆಯ ಚಿತ್ರಣ), ಸಂಖ್ಯಾಶಾಸ್ತ್ರ ವಿಷಯದ ಪದವಿ ತರಗತಿಗಳ ಮೂರು ಪಠ್ಯಪುಸ್ತಕಗಳನ್ನು ಪ್ರಕಟಿಸಿದ್ದಾರೆ.
ಪ್ರಶಸ್ತಿ-ಪುರಸ್ಕಾರಗಳು: ಇವರ ಸಾಹಿತ್ಯ ಮತ್ತು ಸಾಮಾಜಿಕ ಸೇವೆಗಾಗಿ ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿನ ಕನ್ನಡ ಶ್ರೀ ಪ್ರಶಸ್ತಿ, ಅತ್ಯುತ್ತಮ ಶಿಕ್ಷಕ, ಸಮಾಜ ಸೇವಾ ರತ್ನ ಪ್ರಶಸ್ತಿ ಲಭಿಸಿವೆ.