ಟಿ. ಪಿ. ಅಶೋಕ ಹುಟ್ಟಿದ್ದು 26-08-1955ರಲ್ಲಿ. ತಮ್ಮ ಸಾಹಿತ್ಯ ವಿಮರ್ಶೆ, ಅನುವಾದ, ಸಂಪಾದನೆ ಮತ್ತು ಅಂಕಣ ಬರಹಳಿಂದ ಟಿ. ಪಿ. ಅಶೋಕ ಪ್ರಸಿದ್ಧರಾಗಿದ್ದಾರೆ. ಸಾಗರದ ಲಾಲ್ ಬಹುದ್ದೂರ್ ಕಾಲೇಜಿನಲ್ಲಿ ಪ್ರಾಧ್ಯಾಪಕರು ಮತ್ತು ಇಂಗ್ಲಿಷ್ ವಿಭಾಗದ ಮುಖ್ಯಸ್ಥರಾಗಿ ಕಾರನಿರ್ವಹಿಸಿ ನಿವೃತ್ತರಾಗಿದ್ದಾರೆ.
ನವ್ಯ ಕಾದಂಬರಿಗಳ ಪ್ರೇರಣೆಗಳು, ಹೊಸ ಹೆಜ್ಜೆ ಹೊಸ ಹಾದಿ, ಕಾರಂತರ ಕಾದಂಬರಿಗಳಲ್ಲಿ ಗಂಡು ಹೆಣ್ಣು, ಸಾಹಿತ್ಯ ಸಂಪರ್ಕ, ವಾಸ್ತವತಾವಾದ, ಸಾಹಿತ್ಯ ಸಂದರ್ಭ, ಶಿವರಾಮಕಾರಂತ: ಎರಡು ಅಧ್ಯಯನಗಳು, ಪುಸ್ತಕ ಪ್ರೀತಿ, ವೈದೇಹಿ ಅವರ ಕಥೆಗಳು, ಯು. ಆರ್. ಅನಂತಮೂರ್ತಿ: ಒಂದು ಅಧ್ಯಯನ, ತೇಜಸ್ವಿ ಕಥನ, ಕುವೆಂಪು ಕಾದಂಬರಿ: ಎರಡು ಅಧ್ಯಯನಗಳು, ಸಾಹಿತ್ಯ ಸಂಬಂಧ, ಅನುವಾದ : ಫಾದರ್ ಸೆರ್ಗಿಯಸ್, ರಿಕ್ತರಂಗಭೂಮಿ, ಓವರ್‌ಕೋಟ್. ಸಂಪಾದನೆ: ಸಾಹಿತ್ಯ ವಿಮರ್ಶೆ, ಕಾರಂತ ಮಂಥನ, ವೈದೇಹಿ ವಾಚಿಕೆ, ಅರೆಶತಮಾನದ ಅಲೆಬರಹಗಳು, ಶ್ರೀರಂಗ ಸಂಪುಟ-೧, ಕೆ.ವಿ.ಸುಬ್ಬಣ್ಣನವರ ಆಯ್ದ ಬರಹಗಳು, ಎ. ಕೆ. ರಾಮಾನುಜನ್ ನೆನಪಿನ ಸಂಪುಟ, ಆರ್ಕೆಸ್ಟ್ರಾ ಮತ್ತು ತಂಬೂರಿ ಮುಂತಾದ ಕೃತಿಗಳನ್ನು ಪ್ರಕಟಿಸಿದ್ದಾರೆ.
ಸಾಹಿತ್ಯ ಕ್ಷೇತ್ರದ ಸಾಧನೆಗಾಗಿ ಕರ್ನಾಟಕ ಸಾಹಿತ್ಯ ಅಕಾಡೆಮಿ ಬಹುಮಾನ, ವಿ. ಎಂ. ಇನಾಂದಾರ್ ಬಹುಮಾನ, ತೀನಂಶ್ರೀ ಸ್ಮಾರಕ ಬಹುಮಾನ, ವರ್ಧಮಾನ ಸಾಹಿತ್ಯ ಪ್ರಶಸ್ತಿ, ಎಸ್. ವಿ. ಪರಮೇಶ್ವರಭಟ್ಟ ಪ್ರಶಸ್ತಿ, ಸಂದೇಶ್ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿಗಳು ಲಭಿಸಿವೆ.