ಡಾ. ಉದಯ ಕುಮಾರ್ ಇರ್ವತ್ತೂರು ಅವರು ಮೂಲತಃ ಉಡುಪಿ ಜಿಲ್ಲೆಯ ಕಾರ್ಕಳದವರು. ತಂದೆ ನೇಮಿರಾಜ್ ಹಾಗೂ ತಾಯಿ ಮಾಲತಿ. ಮಂಗಳೂರಿನ ಹಂಪನಕಟ್ಟೆಯ ಯೂನಿವರ್ಸಿಟಿ ಕಾಲೇಜಿನಲ್ಲಿ ಪ್ರಾಂಶುಪಾಲರಾಗಿ ಕಾರ್ಯನಿರ್ವಹಿಸಿ ಸದ್ಯ ನಿವೃತ್ತರಾಗಿದ್ದಾರೆ. ಬರವಣಿಗೆ ಇವರ ನೆಚ್ಚಿನ ಹವ್ಯಾಸ. ಈವರೆಗೆ ಹಲವಾರು ಕೃತಿಗಳನ್ನು ಪ್ರಕಟಿಸಿದ್ದಾರೆ. ಅವುಗಳು; ವಾಣಿಜ್ಯ ಶಾಸ್ತ್ರ,- ಕನ್ನಡ ವಿಶ್ವವಿದ್ಯಾಲಯ ಹಂಪಿ, ಅಭಿವೃದ್ಧಿ: ವಾಸ್ತವ ಮತ್ತು ವಿಕಲ್ಪ, ಉಡುಪಿ ಜಿಲ್ಲೆ, ಸರ್ವೋದಯ ಮತ್ತು ಅಭಿವೃದ್ದಿ, ಗೆಲುವಿನ ದುಃಖ ಮತ್ತು ಸೋಲಿನ ಸುಃಖ ಇತ್ಯಾದಿ.