About the Author

ಕವಿತೆ, ಕತೆ, ಕಾದಂಬರಿ ಕ್ಷೇತ್ರದಲ್ಲಿ ಬರವಣಿಗೆಯ ಮೂಲಕ ತಮ್ಮದೇ ಛಾಪು ಮೂಡಿಸಿದ ಬರಹಗಾರ್ತಿ ವಾಣಿ ರಾವ್‌ ಅವರು 1931 ಅಕ್ಟೋಬರ್‌ 4ರಂದು ಜನಿಸಿದರು. ತಾಯಿ ಇಂದಿರಾಬಾಯಿ. ತಂದೆ ಭೀಮಾಚಾರ್‌. ಹೋಮಿಯೋಪತಿಯಲ್ಲಿ ಪಿಎಚ್‌ಡಿ ಪದವೀಧರರು. ಕಾಲೇಜು ದಿನಗಳಿಂದಲೇ ಸಾಹಿತ್ಯ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದ ಇವರು ರಚಿಸಿದ ಕವಿತೆ, ಮಕ್ಕಳ ಕತೆಗಳು ವಿವಿಧ ಪತ್ರಿಕೆಗಳಲ್ಲಿ ಪ್ರಕಟಗೊಂಡಿವೆ. 

ವಾಣಿ ಅವರು ರಚಿಸಿದ ಪ್ರಮುಖ ಕೃತಿಗಳೆಂದರೆ ಸುಪ್ತಚೇತನ, ದರ್ಪಣ, ಆಕಾಶದೀಪ, ಹೇಮಶೃಂಗ (ಕಾದಂಬರಿ); ವನಸುಮ, ನೀಲಕೊಳ, ಗಣೇಶ ಎಲ್ಲಿ, ಮಾಯಾವಿ (ಮಕ್ಕಳ ಕತೆ), ಸಿಂಧು-ಬಿಂದು (ಭಾಷಾಂತರ); ಚಿನ್ನಯ ರಾಮಾಯಣ, ಮಗು, ಸ್ವಾಮಿ ಪ್ರಣವಾನಂದಜೀ (ವೈದ್ಯಕೀಯ); ಹೋಮಿಯೋಪತಿ, ಮೆಟೀರಿಯಾ ಮೆಡಿಕಾ ಸೂತ್ರಗಳು (ಕವನ ಸಂಕಲನ); ಸರ್ವಜಿತು, ಸರ್ವಧಾರಿ, ಕಲೇಸಂ ಪ್ರಕಟಣೆ ಎಪ್ಪತ್ತರ ವಯಸು (ಸಂಪಾದಿತ) ಮುಂತಾದವು. ಇವರಿಗೆ ಗೊರೂರು ಸಾಹಿತ್ಯ ಪ್ರಶಸ್ತಿ, ಅತ್ತಿಮಬ್ಬೆ ಪ್ರಶಸ್ತಿ ಸೇರಿದಂತೆ ಹಲವು  ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಗಿದೆ. 

ವಾಣಿ ರಾವ್

(04 Oct 1931)