ಕವಯತ್ರಿ ವೀಣಾ ಕಲ್ಮಠ ಬಾಗಲಕೋಟೆಯ ಗುಳೇದಗುಡ್ಡದವರು. ತಂದೆ ಮಹೇಶ್ವರಯ್ಯ, ತಾಯಿ ಶಾರದಮ್ಮ. ಪ್ರಸ್ತುತ ಬಿ.ವ್ಹಿ.ವ್ಹಿ ಸಂಘದ ಬಸವೇಶ್ವರ ಕಲಾ ಮಹಾವಿದ್ಯಾಲಯದ ಕನ್ನಡ ಸ್ನಾತಕೋತ್ತರ ವಿಭಾಗದಲ್ಲಿ ಉಪನ್ಯಾಸಕಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ’ಅಲ್ಲಮ ಮತ್ತು ಅಕ್ಕನ ವಚನಗಳಲ್ಲಿ ಮಾಯೆ; ನಿರ್ವಚನದ ನೆಲೆಗಳು’ ಸಂಶೋಧನಾ ಪ್ರಬಂಧಕ್ಕಾಗಿ ಪಿ.ಹೆಚ್.ಡಿ ಪದವಿಯನ್ನು ಪಡೆದಿರುತ್ತಾರೆ. ಅಂತಾರಾಷ್ಟ್ರೀಯ, ರಾಷ್ಟ್ರೀಯ ಮತ್ತು ರಾಜ್ಯ ಮಟ್ಟದ ವಿಚಾರ ಸಂಕಿರಣಗಳಲ್ಲಿ ಭಾಗಿಯಾಗಿ ಸುಮಾರು 25ಕ್ಕೂ ಹೆಚ್ಚು ಸಂಶೋಧನಾ ಲೇಖನಗಳನ್ನು ಮಂಡಿಸಿದ್ದಾರೆ. ಹಾಗೂ ಸಂಪನ್ಮೂಲ ವ್ಯಕ್ತಿಯಾಗಿ ಉಪನ್ಯಾಸಗಳನ್ನು ನೀಡಿದ್ದಾರೆ.