ಲೇಖಕ ಡಾ. ವಿಜಯಕುಮಾರ ಜಿ. ಪರುತೆ ಅವರು ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ಕಾಳಗಿಯವರು. ತಂದೆ ಗುರುಪಾದಪ್ಪ, ತಾಯಿ ಗುರು ಬಾಯಿ. ಕಾಳಗಿಯಲ್ಲಿ ಎಸ್ ಎಸ್ ಎಲ್ ಸಿ ಹಾಗೂ ನಂತರ ಬಿಎ ಪದವಿವರೆಗೆ ಕಲಬುರಗಿಯಲ್ಲಿ, ಗುಲಬರ್ಗಾ ವಿಶ್ವವಿದ್ಯಾಲಯದಿಂದ ಎಂ.ಎ (ಹಿಂದಿ) ಹಾಗೂ ಧಾರವಾಡದ ಕರ್ನಾಟಕ ವಿ.ವಿ.ಯಿಂದ ಎಂ.ಎ (ಕನ್ನಡ) ಪದವಿ ಪಡೆದರು. ಗುಲಬಗಾ ವಿವಿಯಿಂದ (2006) ಪಿಎಚ್ ಡಿ ಪಡೆದರು. ಕನ್ನಡ ಸಾಹಿತ್ಯ ಪರಿಷತ್ ಚಿಂಚೋಳಿ ತಾಲೂಕು (2001-08) ಅಧ್ಯಕ್ಷರಾಗಿ, ಕಲಬುರ್ಗಿ ಜಿಲ್ಲಾ ಕ.ಸಾ.ಪರಿಷತ್ತಿನ ಗೌರವ (2008-12) ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು. ಕಲಬುರಗಿಯ ಶರಣಬಸವೇಶ್ವರ ಮಹಾವಿದ್ಯಾಲಯದಲ್ಲಿ ತಾತ್ಕಾಲಿಕ ಹಿಂದಿ ಉಪನ್ಯಾಸಕರಾಗಿ, ನಂತರ ಚಿಂಚೋಳಿ ತಾಲೂಕಿನ ಶ್ರೀಮತಿ ಸಿ.ಬಿ.ಪಾಟೀಲ್ ಪದವಿ ಮಹಾವಿದ್ಯಾಲಯದಲ್ಲಿ ಉಪನ್ಯಾಸಕರಾಗಿ, ಕಲಬುರ್ಗಿಯ ಶ್ರೀಮತಿ ವ್ಹಿ.ಜಿ . ಮಹಿಳಾ ಪದವಿ ಕಾಲೇಜಿನಲ್ಲಿ ಸಹ ಪ್ರಾಧ್ಯಾಪಕರಾಗಿದ್ದಾರೆ. ಕೃತಿಗಳು: ನೀನೊಲಿದರೆ (ದ್ವಿಪದಿಗಳ ಸಂಗ್ರಹ ಕೃತಿ),