ಲೇಖಕಿ ವಿಜಯಲಕ್ಷ್ಮೀ ಅವರು ಮೂಲತಃ ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ನುಗ್ಗೇಹಳ್ಳಿಯವರು. ಎಂ.ಎ (ಕನ್ನಡ) ಸ್ನಾತಕೋತ್ತರ ಪದವೀಧರರು. ಪ್ರಾಥಮಿಕ ಶಾಲಾ ಶಿಕ್ಷಕಿಯಾಗಿ 4 ವರ್ಷ ಕಾಲ ಸೇವೆ ಸಲ್ಲಿಸಿ, 2006ರಲ್ಲಿ ಕರ್ನಾಟಕ ನಾಗರಿಕ ಸೇವಾ ಪರೀಕ್ಷೆ ತೇರ್ಗಡೆಯಾಗಿ, ಕರ್ನಾಟಕ ಸರ್ಕಾರದ ಕೃಷಿ ಮಾರಾಟ ಇಲಾಖೆಗೆ ಸೇರ್ಪಡೆಗೊಂಡರು. ಬಾಗಲಕೋಟೆ, ಮೈಸೂರು, ಶಿವಮೊಗ್ಗ, ಚಿಕ್ಕಮಗಳೂರು, ಧಾರವಾಡದ ಕೃಷಿ ಮಾರಾಟ ಇಲಾಖೆಯ ಜಿಲ್ಲಾ ಮಾರುಕಟ್ಟೆ ಅಧಿಕಾರಿಯಾಗಿದ್ದರು.
ಪ್ರಸ್ತುತ, ಉತ್ತರ ಕನ್ನಡ ಜಿಲ್ಲೆಯ ಶಿರಸಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯಲ್ಲಿ ಉಪನಿರ್ದೇಶಕಿಯಾಗಿದ್ದಾರೆ. ಜೊತೆಗೆ, ಹಂಪಿ ಕನ್ನಡ ವಿಶ್ವವಿದ್ಯಾಲಯದಲ್ಲಿ ಪಿಎಚ್ ಡಿ ಸಂಶೋಧನಾ ವಿದ್ಯಾರ್ಥಿಯೂ ಹೌದು. ‘ಒಲವ ಸಿರಿ ಗರಿಕೆ’ ಎಂಬುದು ಇವರ ಮೊದಲ ಕವನ ಸಂಕಲನ.