About the Author

ಹಿರಿಯ ಲೇಖಕಿ ವೈ.ಎಸ್.ಗಾಯತ್ರೀ ಅವರು ಸಂಸ್ಕೃತ ಅಧ್ಯಯನ-ಅಧ್ಯಾಪನಗಳಲ್ಲಿ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಚಾಮರಾಜೇಂದ್ರ ಸಂಸ್ಕೃತ ಮಹಾ ಪಾಠ ಶಾಲೆಯಿಂದ ಸಾಹಿತ್ಯ ವಿದ್ವತ್ ಪದವಿ ಹಾಗೂ ಬೆಂಗಳೂರು ವಿಶ್ವವಿದ್ಯಾಲಯದಿಂದ ಎಂ.ಎ ಪದವಿಯನ್ನೂ ಪಡೆದಿರುತ್ತಾರೆ. ಅವರು ವನಿತಾ ರಾಮಸ್ವಾಮಿ ಅವರ ಮಾರ್ಗದರ್ಶನದಲ್ಲಿ ರಚಿಸಿದ ಭಾರತೀಯ ಗಣಿತ ಶಾಸ್ತ್ರಸ್ಯ ವಿಶಿಷ್ಟಂ ಅಧ್ಯಯನಂ’ ಎಂಬ ಪ್ರೌಢ ಪ್ರಬಂಧಕ್ಕೆ ಬೆಂಗಳೂರು ವಿಶ್ವವಿದ್ಯಾಲಯವು ಪಿ.ಎಚ್.ಡಿ ಪದವಿ ನೀಡಿದೆ. ಬೆಂಗಳೂರಿನ ಶ್ರೀ ಬಾಲಾಜಿ ಪದವಿಪೂರ್ವ ಮಹಿಳಾ ಕಾಲೇಜಿನಲ್ಲಿ ಸಂಸ್ಕೃತ ಉಪನ್ಯಾಸಕರಾಗಿ 26 ವರ್ಷಗಳಿಂದ ಕಾರ್ಯನಿರ್ವಹಿಸಿದ್ದಾರೆ. ಸ್ವದೇಶಿ ವಿಜ್ಞಾನ ಆಂದೋಲನ ಕರ್ನಾಟಕ, ರಾಷ್ಟ್ರೀಯ ವೇದ ವಿಜ್ಞಾನ ಸಂಸ್ಥೆ, ನಾದವೇದ ಅಧ್ಯಯನ ಕೇಂದ್ರ ಮುಂತಾದ ಸಂಸ್ಥೆಯ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದಾರೆ. ಅವರ ಉಪನ್ಯಾಸಗಳ ಕುರಿತ ಲೇಖನಗಳು ಹಲವಾರು ನಿಯತಕಾಲಿಕೆಗಳಲ್ಲಿ ಪ್ರಕಟಗೊಂಡಿದೆ. ವಿಜ್ಞಾನ ಹಾಗೂ ಸಂಸ್ಕೃತ ಸಾಹಿತ್ಯಕ್ಕೆ ಸಂಬಂಧಿಸಿದ ಹಲವಾರು ಗ್ರಂಥಗಳನ್ನು ಕನ್ನಡಕ್ಕೆ ಅನುವಾದ ಹಾಗೂ ಭಾರತೀಯ ಗಣಿತಶಾಸ್ತ್ರಕ್ಕೆ ಸಂಬಂಧಿಸಿದ ಗ್ರಂಥಗಳನ್ನು ರಚಿಸಿರುತ್ತಾರೆ.

 ಕೃತಿಗಳು: ಭಾರತೀಯ ಸಂಸ್ಕೃತಿಯ ಮಹತ್ತ್ವ ಮತ್ತು ವೈಶಿಷ್ಟ್ಯ (ಅನುವಾದಿತ)

ವೈ.ಎಸ್.ಗಾಯತ್ರೀ