ರಂಗ ಕಲಾವಿದ ಯಶವಂತ ಸರದೇಶಪಾಂಡೆ ಅವರು ಮೂಲತಃ ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ (ಜನನ: 13-06-1965) ಉಕ್ಕಲಿ ಗ್ರಾಮದವರು. ತಂದೆ ಶ್ರೀಧರರಾವ್ ಸೆರದೇಶಪಾಂಡೆ, ತಾಯಿ ಕಲ್ಪನಾದೇವಿ. ಹೆಗ್ಗೋಡಿನ ನಿನಾಸಂ ನಾಟಕ ಸಂಸ್ಥೆಯಿಂದ ಡಿಪ್ಲೊಮಾ ಪದವೀಧರರು. ನ್ಯೂಯಾರ್ಕ್ ವಿಶ್ವವಿದ್ಯಾಯದಿಂದ ನಾಟಕ ರಚನೆ, ಚಲನ ಚಿತ್ರ ಸಂಭಾಷಣೆಯ ವಿಶೇಷ ತರಬೇತಿ ಪಡೆದಿದ್ದಾರೆ.
ಅಂಧಯುಗ, ಇನ್‌ಸ್ಪೆಕ್ಟರ್ ಜನರಲ್, ಮಿಡ್‌ಸಮರ್ ನೈಟ್ಸ್‌ಡ್ರೀಮ್, ಬಾಡಿಗೆ ಮನೆ, ಕಿತ್ತೂರು ರಾಣಿ ಚೆನ್ನಮ್ಮ, ಪುಷ್ಪರಾಣಿ, ಗಲಿವರನ ಯಾತ್ರೆ, ಬೆಪ್ಪುತಕ್ಕಡಿ ಬೋಳೇ ಶಂಕರ, ತುಂಟ ಮಕ್ಕಳ ತಂಟೆ, ಮಕ್ಕಳೆರಡೇ ಇರಲಿ, ಕುಂಟಾ ಕುಂಟ ಕುರವತ್ತಿ ಮುಂತಾದ ಅರವತ್ತಕ್ಕೂ ಹೆಚ್ಚು ನಾಟಕಗಳ ನಿರ್ದೇಶನ. ರಂಗವರ್ತುಲ, ಬೇಂದ್ರೆ ರಂಗಾವಳಿಯ ಮುಖಾಂತರ ಬೇಂದ್ರೆಯವರ ಎಲ್ಲ ನಾಟಕಗಳನ್ನೂ ರಂಗಕ್ಕೆ ತಂದ ಕೀರ್ತಿ ಇವರದ್ದು. ರೇಡಿಯೋ, ದೂರದರ್ಶನಗಳಿಗಾಗಿ ಕಾರ್ಯಕ್ರಮಗಳು. ಲಕ್ಷಾಂತರ ಪ್ರೇಕ್ಷಕರನ್ನು ನಗಿಸಿದ ನಾಟಕಗಳ ನಿರ್ದೇಶಕ, ನಟ, ಆಲ್ ದಿ ಬೆಸ್ಟ್, ರಾಶಿ ಚಕ್ರ, ಸಹಿ ರೀ ಸಹಿ, ದಿಲ್ ಮಾಂಗೆ ಮೋರ್ ನಗೆ ನಾಟಕಗಳನ್ನು ತಿಳಿ ಹಾಸ್ಯದ ಜೊತೆಗೆ ಎಂ.ಟಿ.ಆರ್. ಸಹಯೋಗದೊಡನೆ ಯೋಚಿಸಿ ರಂಗ ಸಂಭ್ರಮದ ಕಾರ್ಯಕ್ರಮಗಳು, ’ರಾಶಿ ಚಕ್ರ’ ನಗೆ ನಾಟಕದಲ್ಲಿ ಪ್ರೇಕ್ಷಕರನ್ನು ನಕ್ಕು ನಗಿಸುವ ಏಕವ್ಯಕ್ತಿ ಅಭಿನಯ. ಯದ್ವಾ-ತದ್ವಾ, ಬಣ್ಣದ ಬುಗುರಿ, ದಶಾವತಾರ, ಪರ್ವ, ತುಂತುರು ಧಾರಾವಾಹಿಗಳ ನಟ, ಧಾರಾವಾಹಿಗಳ ಸಂಭಾಷಣಾಕಾರ, ಅತಿಥಿ, ಮರ್ಮ, ಜೂಜಾಟ, ಸ್ಟೂಡೆಂಟ್, ಅಮೃತಧಾರೆ, ರಾಮಶಾಮಭಾಮ ಚಲನಚಿತ್ರಗಳಲ್ಲೂ ಅಭಿನಯಿಸಿದ್ದಾರೆ.
ಸಹಿ ರೆ ಸಹಿ (ಮೂಲ:ಮರಾಠಿ) ಕಾಲಚಕ್ರ ಐಡಿಯಾ ಮಾಡ್ಯಾರ ಎಂಬ ಚಲನಚಿತ್ರ ನಿರ್ಮಾಣ, ರಾಮ ಶ್ಯಾಮ ಭಾಮ ಎಂಬ ಚಲನಚಿತ್ರಕ್ಕೆ ಸಂಭಾಷಣೆ ಬರೆದಿದ್ದು ಕಮಲಹಾಸನ್ ರ ಪಾತ್ರದಲ್ಲಿ ಉತ್ತರಕರ್ನಾಟಕದ ಆಡುಭಾಷೆಯನ್ನು ಆಡಿಸಿದ್ದಾರೆ. ಪ್ರಶಸ್ತಿ ಉತ್ತಮ ಸಂಭಾಷಣೆ ರಚನೆಗಾಗಿ ಸನ್‌ಫೀಸ್ಟ್ ಉದಯ ಟಿವಿ ಪ್ರಶಸ್ತಿ, ಆರ್ಯಭಟ ಪ್ರಶಸ್ತಿ, ಮಯೂರ ಪ್ರಶಸ್ತಿ, ನಗೆ ಸರದಾರ ಪ್ರಶಸ್ತಿ ಮುಂತಾದ ಪ್ರಶಸ್ತಿ ಗೌರವಗಳು ಸಂದಿವೆ.