Story/Poem

ಮೇಘನಾ ಸುಧೀಂದ್ರ

ಜಯನಗರದ ಹುಡುಗಿ ಎಂದೇ ಖ್ಯಾತರಾದ ಮೇಘಾನರವರು ಬಾರ್ಸಿಲೋನಾದಲ್ಲಿ ಏಐ ವಿಷಯದಲ್ಲಿ ಪರಿಣಿತಿ ಪಡೆದು ಈಗ ಬೆಂಗಳೂರಿನ ಒಂದು ಖಾಸಗಿ ಸಂಸ್ಥೆಯಲ್ಲಿ ಏ ಐ(ಕೃತಕ ಬುದ್ಢಿಮತ್ತೆ) ಗುಂಪಿನ ಟೀಮ್ ಲೀಡ್ ಆಗಿ ಕೆಲಸ ಮಾಡುತ್ತಿದ್ದಾರೆ. 2019ರಲ್ಲಿ ನಡೆದ ವಿಜಯ ಕರ್ನಾಟಕದ ಯುಗಾದಿ ಕಥಾ ಸ್ಪರ್ಧೆಯಲ್ಲಿ ಮೂರನೇ ಬಹುಮಾನ ವಿಜೇತರು. ಜಯನಗರದ ಹುಡುಗಿ, ಲಿಪಿಯ ಪತ್ರಗಳು #AI ಕಥೆಗಳು,ಬೆಂಗಳೂರು ಕಲರ್ಸ್ , ಪ್ರೀತಿ ಗೀತಿ ಇತ್ಯಾದಿ ಇವರ ಪ್ರಕಟಿತ ಪುಸ್ತಕಗಳು. ಕನ್ನಡಗೊತ್ತಿಲ್ಲ ಸಂಸ್ಥೆಯಲ್ಲಿ ಕನ್ನಡೇತರರಿಗೆ ಕನ್ನಡ ಕಲಿಸುವ ಕಾಯಕದಲ್ಲಿ 6 ವರ್ಷದಿಂದ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ. 
ಹೊಸ ಪೀಳಿಗೆಯ ಕಥೆಗಳು ಬರೆಯುವುದು ಇವರ ಅಭ್ಯಾಸ. ಚಾರಣ ಮತ್ತು ಕರ್ನಾಟಕ ಶಾಸ್ತ್ರೀಯ  ಸಂಗೀತ ಇವರ ಆಸಕ್ತಿ.

More About Author

Story/Poem

ಕಾಡಿನ ಮಾತು  

ಒನ್ ಇಂಡಿಯಾ ಡಿಜಿಟಲ್ ಮಾಧ್ಯಮದಲ್ಲಿ ಹಳೆಯ ಬೆಂಗಳೂರಿನ ಕತೆ ಹಾಗೂ ಪ್ರಸಂಗಗಳನ್ನು ‘ಜಯನಗರದ ಹುಡುಗಿ’ ಹೆಸರಿನಲ್ಲಿ ಬರೆದು ಖ್ಯಾತಿ ಪಡೆದ ‘ಮೇಘನಾ ಸುಧೀಂದ್ರ’ ಅವರು ‘Master of Science in Artificial Intelligence and Signal Processing&rsqu...

Read More...