Story/Poem

ಸಿದ್ಧಲಿಂಗ ಪಟ್ಟಣಶೆಟ್ಟಿ

ಕವಿ-ಅನುವಾದಕ-ಅಂಕಣಕಾರರಾಗಿ ಚಿರಪರಿಚಿತರಿರುವ ಸಿದ್ಧಲಿಂಗ ಪಟ್ಟಣಶೆಟ್ಟಿ ಅವರು ಜನಿಸಿದ್ದು 1939ರ ನವಂಬರ್ ೩ರಂದು. ಧಾರವಾಡ ಸಮೀಪದ ಯಾದವಾಡ ಎಂಬ ಹಳ್ಳಿಯಲ್ಲಿ ಜನಿಸಿದ ಅವರು ಒಂದೂವರೆ ವರ್ಷದವರಿರುವಾಗಲೇ ತಂದೆಯನ್ನು ಕಳೆದುಕೊಂಡರು. ಕಡು ಬಡತನದಿಂದಾಗಿ ತಾಯಿಯ ತವರು ಮನೆ ಮನಗುಂಡಿ ಸೇರಿದರು. ಚಹಾ ಅಂಗಡಿಯಲ್ಲಿ ಕೆಲಸ ಮಾಡುತ್ತ ಪ್ರಾಥಮಿಕ ವಿದ್ಯಾಭ್ಯಾಸ ಮುಗಿಸಿದರು. ಶಿಕ್ಷಣ ಮುಂದುವರಿಸುವ ದೃಢ ಸಂಕಲ್ಪದಿಂದ ತಾಯಿಯೊಂದಿಗೆ ಮತ್ತೆ ಧಾರವಾಡಕ್ಕೆ ಬಂದ ಅವರು  ಹಿಂದೀ ಎಂ.ಎ., ಪಿಎಚ್.ಡಿ. ಪದವಿಗಳನ್ನು ಪಡೆದರು. ಒಂದು ವರ್ಷ ಹೈಸ್ಕೂಲ್ ಶಿಕ್ಷಕ, ಒಂದು ವರ್ಷ ಶಿರಸಿ ಕಾಲೇಜಿನಲ್ಲಿ ಉಪನ್ಯಾಸಕರಾಗಿದ್ದು, 1966 ರಿಂದ 1999ರ ವರೆಗೆ ಕರ್ನಾಟಕ ಕಾಲೇಜಿನಲ್ಲಿ ಹಿಂದೀ ಅಧ್ಯಾಪಕರಾಗಿ, ಪ್ರೊಫೆಸರ್ ಆಗಿ ಕಾರ್ಯ ನಿರ್ವಹಿಸಿ ನಿವೃತ್ತರಾಗಿದ್ದಾರೆ.

More About Author

Story/Poem

ಹರಿಗೀತ

ನಿನಗಿಷ್ಟವಾಗಲಿ ಎಂದೇ ಕುಣಿದೆ ಚಿಂತಾಮಣಿ,     ಮನದಣಿಯೆ ನರ್ತಿಸಿದೆ  ಆಗಲಿ ಚಿತ್ತ ಸತ್ಯ ಸದಮಲ,  ಗೆಳೆಯ ಗೆಳತಿಯರ ಕಟಕಿ ವ್ಯಂಗ್ಯ  ಅಸೂಯೆ ಸಹಿಸಿದೆ ನಿತ್ಯ  ಹೀಗಳೆದದ್ದು ಆಡಿಕೊಂಡದ್ದು ಕೇಳಿಯೂ ನಂಬದಾದೆ,  ಸಮರ್ಪಣೆಯ ಅಂತರ ಅರಿಯದಜ್ಞಾನ ...

Read More...