Story/Poem

ಸುಬ್ರಾಯ ಚೊಕ್ಕಾಡಿ

ಕವಿ, ವಿಮರ್ಶಕ, ನಾಟಕಕಾರರಾದ ಸುಬ್ರಾಯ ಚೊಕ್ಕಾಡಿಯವರು  ಹುಟ್ಟಿದ್ದು 29-06-1940 ರಂದು ಸುಳ್ಯ ತಾಲ್ಲೂಕಿನ ಚೊಕ್ಕಾಡಿಯಲ್ಲಿ. ತಂದೆ ಯಕ್ಷಗಾನ ಭಾಗವತರಾದ ಗಣಪಯ್ಯ, ತಾಯಿ ಸುಬ್ಬಮ್ಮ. ಪ್ರಾಥಮಿಕ ಶಿಕ್ಷಣ ಚೊಕ್ಕಾಡಿ. ಹೈಸ್ಕೂಲು ಓದಿದ್ದು ಪಂಜದಲ್ಲಿ  ಮೈಸೂರು ವಿಶ್ವವಿದ್ಯಾಲಯದ ಅಂಚೆ ಮತ್ತು ತೆರಪಿನ ಶಿಕ್ಷಣ ಸಂಸ್ಥೆಯಿಂದ ಎಂ.ಎ. (ಕನ್ನಡ) ಪದವಿ. ತಂದೆ ಯಕ್ಷಗಾನ ಕವಿ, ಭಾಗವತರಾದುದರಿಂದ ಕಿವಿಗೆ ಬೀಳುತ್ತಿದ್ದ ಲಯಬದ್ಧ ಹಾಡುಗಳು, ಹೈಸ್ಕೂಲಿಗೆ ನಡೆದು ಹೋಗುವಾಗ ಕಾಡಿನ ಮಧ್ಯೆ ಕೇಳುತ್ತಿದ್ದ ನೀರಿನ ಝುಳು ಝುಳು ನಾದ, ಹಕ್ಕಿಗಳ ಕೂಗು, ಮರಗಳ ಮರ್ಮರತೆಯಿಂದ ಪ್ರಭಾವಿತರಾಗಿ ಹೈಸ್ಕೂಲು ವಿದ್ಯಾರ್ಥಿಯಾಗಿದ್ದಾಗಲೇ ಕವನ ಕಟ್ಟುವ ಕಾಯಕ ಪ್ರಾರಂಭ. ಉದ್ಯೋಗಕ್ಕಾಗಿ ಆಯ್ದುಕೊಂಡದ್ದು ಶಿಕ್ಷಕ ವೃತ್ತಿ. ಸುಳ್ಯ, ಪೈಲೂರು, ಕುಕ್ಕುಜಡ್ಕ ಶಾಲೆಗಳಲ್ಲಿ 39 ವರ್ಷಕಾಲ ಸಹಾಯಕ ಶಿಕ್ಷಕರಾಗಿ, ಮುಖ್ಯೋಪಾಧ್ಯಾಯರಾಗಿ ಸಲ್ಲಿಸಿದ ಸೇವೆ. ಎಳೆವೆಯಿಂದಲೇ ಅನುಭವಿಸಿದ ಕಷ್ಟ ಕಾರ್ಪಣ್ಯದ ದಿನಗಳು, ನೋವಿನ, ಅವಮಾನದ, ಅಸಹಾಯಕತೆಯ ಘಟನೆಗಳಿಗೆ ಪ್ರತಿಭಟನೆಯ ರೂಪ ನೀಡಿದ್ದೆ ಮೂರ್ತ ಕಾವ್ಯರೂಪದಲ್ಲಿ. ಸಂಕೇತ, ಪ್ರತಿಮೆ, ರೂಪಕಗಳ ಮೂಲಕ ಹೊರಹಾಕಿದಾಗ ಕವಿಯೊಬ್ಬನ ಆವಿರ್ಭಾವ. ಹೀಗೆ ಬರೆದ ಕವನಗಳು ನಾಡಿನ ಪ್ರಮುಖ ಪತ್ರಿಕೆಗಳೆಲ್ಲದರಲ್ಲೂ ಪ್ರಕಟಿತವಾಗಿವೆ. 

More About Author

Story/Poem

ಪ್ರೀತಿ ನದಿಯಂತೆ

ಪ್ರೀತಿ ನದಿಯಂತೆ-ನಿಜ,ಈ ನದಿಯು ನೇಸರಿನ ಕಿರಣಗಳ ಹೊದಿಕೆಯಡಿಯಲ್ಲಿ ಎರಡೂ ದಡವ ಅಪ್ಪುತ್ತ , ಮರಗಳ ನೆರಳ ಹಿಡಿಯುತ್ತ ಮೆಲು ಚಲನೆ-ಒಮ್ಮೊಮ್ಮೆ ಹಠಮಾರಿ ಮಕ್ಕಳ ಮೇಲಿನಾಕ್ರೋಶದಂಥ ನಡವಳಿಕೆ ಮುನ್ನಡೆದಂತೆ ಬೆಟ್ಠ ಸಾಗರವೊಂದು-ನಡುವ ವಿಸ್ತಾರದಲಿ ನವಸೃಷ್ಟಿ ಸಂಭ್ರಮ.ಉಳಿದದ್ದೆಲ್ಲ ತನ್ನರಿವಿ...

Read More...