ಭೂತ ಕಾಲದಲ್ಲಿ ದಲಿತರು ಎದುರಿಸಿದ, ಪ್ರಸ್ತುತ ಎದುರಿಸುತ್ತಿರುವ, ಮುಂದೆ ಭವಿಷ್ಯದಲ್ಲಿ ಎದುರಿಸಲಿರುವ ಸಮಸ್ಯೆಗಳ ಕುರಿತು ದಲಿತ ಚಿಂತಕ ಆನಂದ್ ತೇಲ್ತುಂಬ್ಡೆ ಅವರ ವಿಚಾರ ವ್ಯಕ್ತ ಪಡಿಸಿದ್ದಾರೆ. ಎಚ್.ಎಸ್. ಅನುಪಮಾ, ಬಸೂ ಅವರು ಸಂಪಾದಿಸಿದ್ದಾರೆ. ಪ್ರಸ್ತುತ ದಲಿತರು ಫ್ಯಾಸಿಸ್ಟ್ ಮತ್ತು ಕಾರ್ಪೋರೇಟ್ ಶಕ್ತಿಗಳಿಂದ ಅನುಭವಿಸುತ್ತಿರುವ ತೊಂದರೆಗಳ ಕುರಿತು ಚರ್ಚೆ ನಡೆಸಿದ್ದಾರೆ. ಖೈರ್ಲಾಂಜಿ ಪ್ರಕರಣದ ಹೈಕೋರ್ಟ್ ತೀರ್ಪು ಹೇಗೆ ದಲಿತರ ಆತ್ಮವಿಶ್ವಾಸಕ್ಕೆ ಪೆಟ್ಟುಬಿದ್ದಿದೆ ಎಂಬುದನ್ನು ವಿವರಿಸಿದ್ದಾರೆ. ದೇಶದ ವಿವಿಧ ಕಡೆ ದಲಿತರ ಮೇಲೆ ನಡೆಯುತ್ತಿರುವ ನಿರಂತರ ದಾಳಿಗಳ ಕುರಿತು ಮಾಹಿತಿಯನ್ನು ನೀಡಿದ್ದಾರೆ.
ಲೇಖಕಿ, ಕವಯತ್ರಿ ಎಚ್.ಎಸ್.ಅನುಪಮಾ ಅವರು ವೃತ್ತಿಯಲ್ಲಿ ವೈದ್ಯೆ. ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಕವಲಕ್ಕಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ವೃತ್ತಿಯ ಜೊತೆಗೆ ಸಾಹಿತ್ಯ ಕ್ಷೇತ್ರದಲ್ಲಿಯೂ ತಮ್ಮನ್ನು ತೊಡಗಿಸಿಕೊಂಡಿರುವ ಅವರು ಕಾಡುಹಕ್ಕಿಯ ಹಾಡು, ಸಹಗಮನ, ಬುದ್ಧ ಚರಿತೆ (ಖಂಡ ಕಾವ್ಯ), ನೆಗೆವ ಪಾದದ ಜಿಗಿತ, ಸಬರಮತಿ- ನೀಳ್ಗವಿತೆ ಎಂಬ ಐದು ಕವನ ಸಂಕಲನಗಳು, ಹೂವರಳಿದ್ದಕ್ಕೆ ಯಾಕೆ ಸಾಕ್ಷಿ?, ಚಿವುಟಿದಷ್ಟೂ ಚಿಗುರು, ಕೋವಿಡ್: ಡಾಕ್ಟರ್ ಡೈರಿ - ಗ್ರಾಮಭಾರತದ ಕಥೆಗಳು ಎಂಬ ಮೂರು ಕಥಾಸಂಕಲನಗಳು, ಡಾ. ಬಾಬಾಸಾಹೇಬ್ ಅಂಬೇಡ್ಕರ್ – ಕಿರು ಜೀವನ ಚರಿತ್ರೆ , ಮೋಚಕನ ಹೆಜ್ಜೆಗಳು - ಡಾ. ...
READ MORE