ಖ್ಯಾತ ವಿಮರ್ಶಕ-ಲೇಖಕ-ಕಥೆಗಾರ ಎಸ್. ದಿವಾಕರ ಅವರ ಆಯ್ದ ಪ್ರಬಂಧಗಳ ಸಂಕಲನ-ಆ ಅದು ತುಂಬಿ ಈ ಇದು ತುಂಬಿ. ಕರ್ನಾಟಕ ರಾಜ್ಯೋತ್ಸವ ಸಂಭ್ರಮದ ಅಂಗವಾಗಿ ಈ ಕೃತಿಯನ್ನು ಪ್ರಕಟಿಸಿದೆ. ಕಥೆ, ಕಾದಂಬರಿ, ವಿಮರ್ಶೆ ಹೀಗೆ ಹತ್ತು ಹಲವು ಪ್ರಕಾರಗಳಲ್ಲಿ ಕೃಷಿ ಮಾಡಿರುವ ಲೇಖಕರು, ಪ್ರಬಂಧ ಬರಹಗಳಲ್ಲೂ ತಮ್ಮದೇ ಛಾಪು ಮೂಡಿಸಿದವರು. ಅವರ ಪ್ರಬಂಧಗಳು ಚಿಂತನಾ ಪ್ರಧಾನವಾಗಿದ್ದು, ಸಾಮಾಜಿಕ ವಿದ್ಯಮಾನಗಳೂ ಸೇರಿದಂತೆ ಸಾಹಿತ್ಯ ಅಧ್ಯಯನದ ವಿದ್ವತ್ ಪೂರ್ಣ ಬರಹ ರೂಪುಗಳಾಗಿ ಓದುಗರ ಗಮನ ಸೆಳೆಯುತ್ತವೆ..
ಎಸ್. ದಿವಾಕರ್ ಅವರು 28 ನವೆಂಬರ್ 1944 ರಲ್ಲಿ ಜನಿಸಿದರು. ಹುಟ್ಟಿದ್ದು ಬೆಂಗಳೂರು ಜಿಲ್ಲೆಯ ಸೋಮತ್ತನಹಳ್ಳಿಯಲ್ಲಿ. ಸಣ್ಣಕಥೆ, ಕಾವ್ಯ, ಪ್ರಬಂಧ, ವಿಮರ್ಶೆ, ಅಂಕಣ ಬರಹ, ಭಾಷಾಂತರ, ಸಂಪಾದನೆ ಇವೆಲ್ಲದರಲ್ಲಿ ಸ್ವೋಪಜ್ಞತೆ ಮತ್ತು ವಿಶಿಷ್ಟತೆ ಮೆರೆದಿರುವ ಎಸ್. ದಿವಾಕರ್, ಸವಿಸ್ತಾರ ಓದಿನ ಜಾಗೃತ ಮನಸ್ಸಿನ ಲೇಖಕರು. ಸುಧಾ, ಪ್ರಜಾವಾಣಿ ಪತ್ರಿಕೆಗಳಲ್ಲಿ ಕೆಲಸ ಮಾಡಿ, ನಂತರ ಅಮೆರಿಕನ್ ಕಾನ್ಸುಲೇಟ್ ಕಚೇರಿಯಲ್ಲಿ ಕನ್ನಡ ಸಂಪಾದಕರಾಗಿ ಕಾರ್ಯನಿರ್ವಹಿಸಿದ್ದಾರೆ. ಇವರ ಪ್ರಕಟಿತ ಕೃತಿಗಳಾದ ಇತಿಹಾಸ, ಎಲ್ಲ ಬಲ್ಲವರಿಲ್ಲ ಈ ಊರಿನಲ್ಲಿ ಆಯ್ದ ಕತೆಗಳು (ಕಥಾ ಸಂಕಲನಗಳು), ಆತ್ಮಚರಿತ್ರೆಯ ಕೊನೆಯ ಪುಟ (ಕವನ ಸಂಕಲನ), ನಾಪತ್ತೆಯಾದ ಗ್ರಾಮಾಫೋನು, ಕೃಷ್ಣಲೀಲೆಯಿಂದ ರಾಮರಾಜ್ಯಕ್ಕೆ ...
READ MORE