ಆಹಾರದ ರಾಜಕೀಯ ಹೊಸದಲ್ಲ. ಆದರೂ, ಮಾನವನ ಮೇಲೆ ಆಗುತ್ತಿರುವ ಮಾರಕ ಪರಿಣಾಮ ಸಾಮಾನ್ಯರ ಅರಿವಿಗೆ ಬರುತ್ತಿಲ್ಲ. ರಾಷ್ಟ್ರ ರಾಷ್ಟ್ರಗಳ ನಡುವೆ, ಉತ್ಪನ್ನ-ಉತ್ಪನ್ನಗಳ ನಡುವೆ ನಡೆದುಕೊಂಡು ಬಂದಿರುವ ಒಳ ರಾಜಕೀಯವನ್ನು ‘ವೈಜ್ಞಾನಿಕ ಸತ್ಯ’ಗಳನ್ನು ತಿಳಿಸಿಕೊಡುವ ನಿಟ್ಟಿನಲ್ಲಿ ಆಹಾರ ತಜ್ಞ ಕೆ. ಸಿ. ರಘು ಅವರು ಈ ಕೃತಿಯಲ್ಲಿ ಬೆಳಕು ಚೆಲ್ಲಿದ್ದಾರೆ.
ಆಹಾರ ತಜ್ಞ, ಅಂಕಣಕಾರ ಕೆ.ಸಿ. ರಘು ಅವರು ಅನೇಕ ವರ್ಷಗಳ ಕಾಲ ಫುಡ್ ಅಂಡ್ ನ್ಯೂಟ್ರೇಷನ್ ವರ್ಲ್ಡ್ ಎಂಬ ಆಂಗ್ಲ ನಿಯತಕಾಲಿಕದ ಸಂಪಾದಕರಾಗಿದ್ದರು. ಅನೇಕ ದಿನಪತ್ರಿಕೆಗಳಲ್ಲಿ ಅಂಕಣಗಳನ್ನು ಬರೆಯುತ್ತಿದ್ದರು. ಸಾಮಾನ್ಯ ವಿಜ್ಞಾನ ಮತ್ತು ಆರ್ಥಿಕತೆಯ ವಿಷಯಗಳನ್ನು ಅತಿಥಿ ಉಪನ್ಯಾಸಕರಾಗಿ ನಿರ್ವಹಿಸಿದ್ದಾರೆ. ಅವರು ಸ್ಥಾಪಿಸಿದ ಪ್ರಿಸ್ಟೀನ್ ಆರ್ಗ್ಯಾನಿಕ್ಸ್ ಎಂಬ ಸಂಸ್ಥೆಯಲ್ಲಿ ನವಜಾತ ಶಿಶುಗಳಲ್ಲಿ ಕಂಡುಬರುವ ಮಾರಕ ಕಾಯಿಲೆಗಳಿಗೆ ಪೌಷ್ಟಿಕಾಂಶದ ಪರಿಹಾರವನ್ನು ಸಂಶೋಧನೆಯಿಂದ ಕಂಡುಹಿಡಿದು, ದೇಶಾದ್ಯಂತ ಹಾಗೂ ವಿದೇಶಕ್ಕೂ ಒದಗಿಸುತ್ತಿದ್ದರು. ಈ ಕಾರ್ಯದಿಂದ ಸುಮಾರು 5 ಸಾವಿರ ನವಜಾತ ಶಿಶುಗಳನ್ನು ಸಾವಿನ ದವಡೆಯಿಂದ ಪಾರು ಮಾಡಲಾಗಿತ್ತು. ಭಾರತದಲ್ಲಿ ಈ ರೀತಿಯ ...
READ MORE