’ಆನಂದ’ ಕೃತಿಯ ಮೂಲ ಲೇಖಕರಾದ ದಾಸರಿ ವೆಂಕಟರಮಣ ಕೃತಿಯನ್ನು ಕನ್ನಡಕ್ಕೆ ಅನುವಾದಿಸಿದವರು ಮಕ್ಕಳ ಸಾಹಿತಿ ಡಾ. ಸಿ.ಎಂ. ಗೋವಿಂದರೆಡ್ಡಿಯವರು.
ಜಗತ್ತಿನ ಸಾಹಿತ್ಯದಲ್ಲಿ ಮಕ್ಕಳ ಸಾಹಿತ್ಯಕ್ಕೆ ಅನನ್ಯವಾದ ಸ್ಥಾನವಿದೆ. ತೆಲುಗಿನಲ್ಲಿ ಪ್ರಸಿದ್ದವಾಗಿರುವ, 2014 ನೇ ಸಾಲಿನ ಕೇಂದ್ರಸಾಹಿತ್ಯ ಅಕಾಡೆಮಿಯ ಪ್ರಶಸ್ತಿಗೆ ಭಾಜನವಾಗಿರುವ 'ಆನಂದಂ' ಕೃತಿಯಲ್ಲಿ ಇಪ್ಪತ್ತೆರಡು ವಿಶಿಷ್ಟ ಕತೆಗಳಿವೆ. - ಮಕ್ಕಳಲ್ಲಿ ವೈಚಾರಿಕತೆ, ಪ್ರಶ್ನಿಸುವ ಮನೋಭಾವ, ಸಮಾನತೆ, ಸಹನೆಯನ್ನುಬೆಳೆಸುವ ಕತೆಗಳು ಇಲ್ಲಿವೆ.
ಮಕ್ಕಳ ಸಾಹಿತಿ ಎಂದು ಹೆಸರಾಗಿರುವ ಡಾ.ಸಿ.ಎಂ.ಗೋವಿಂದರೆಡ್ಡಿಯವರು ಮಕ್ಕಳ ಸಾಹಿತ್ಯದ ಜೊತೆಗೆ ಇತರೆ ಸಾಹಿತ್ಯದಲ್ಲೂ ಕೃತಿಗಳನ್ನು ರಚಿಸಿದ್ದಾರೆ. ಇವರು ೧೯೫೮ರ ಆಗಸ್ಟ್ ೧೧ರಂದು ಕೋಲಾರ ಜಿಲ್ಲೆ ಮಾಲೂರು ತಾಲ್ಲೂಕಿನ ಚನ್ನಿಗರಾಯಪರ ಗ್ರಾಮದ ಮುನಿಸ್ವಾಮಿರೆಡ್ಡಿ ಮತ್ತು ಸುಬ್ಬಮ್ಮ ದಂಪತಿಗಳ ಮಗನಾಗಿ ಜನಿಸಿದರು. ತಾಳಕುಂಟೆ, ಲಕ್ಕೂರು ಮತ್ತು ಮಾಲೂರಿನಲ್ಲಿ ಕ್ರಮವಾಗಿ ಪ್ರಾಥಮಿಕ, ಮಾಧ್ಯಮಿಕ ಮತ್ತು ಪ್ರೌಢಶಿಕ್ಷಣವನ್ನು ಪಡೆದು, ಮೈಸೂರು ವಿಶ್ವವಿದ್ಯಾಲಯದಿಂದ ಪದವಿ ಮತ್ತು ಸ್ನಾತಕೋತ್ತರ ಪದವಿಗಳನ್ನು ಪಡೆದುಕೊಂಡದ್ದಲ್ಲದೆ ‘ಕೋಲಾರಜಿಲ್ಲೆಯ ಜಾತ್ರೆಗಳು’ ಎಂಬ ವಿಷಯದಲ್ಲಿ ಪಿಎಚ್.ಡಿ. ಮಹಾಪ್ರಬಂಧವನ್ನು ರಚಿಸಿ ಡಾಕ್ಟರೇಟ್ ಪದವಿಯನ್ನೂ ಪಡೆದರು. ಇವರು ಸಾರ್ವಜನಿಕ ಶಿಕ್ಷಣ ಇಲಾಖೆಯಲ್ಲಿ ಪ್ರಾಥಮಿಕ ಶಾಲಾಶಿಕ್ಷಕರಾಗಿ, ಪ್ರೌಢಶಾಲಾ ...
READ MORE