ಸಿ.ಆರ್. ಚಂದ್ರಶೇಖರ್ ಅವರ ಲೇಖನಗಳ ಸಂಗ್ರಹ ಆಪ್ತ ಸಮಾಲೋಚನೆ. ಮಾನಸಿಕ ಸಮಸ್ಯೆಗಳ ಬಗೆಗೆ ನಿಜ ಪ್ರಕರಣಗಳನ್ನು ಆಧಾರವಾಗಿಟ್ಟುಕೊಂಡು ಲೇಖಕ ಈ ಕೃತಿಯನ್ನು ಬರೆದಿದ್ದಾರೆ. 66ನೇ ಕನ್ನಡ ರಾಜ್ಯೋತ್ಸವದ ವೇಳೆಯಲ್ಲಿ ಸಪ್ನ ಬುಕ್ ಹೌಸ್ ಪ್ರಕಾಶನದ ಮೂಲಕ ತೆರೆ ಕಂಡ ಕೃತಿಯಿದೆ. ಈ ಕೃತಿಗೆ ಕವಿ ಎಚ್.ಎಸ್. ವೆಂಕಟೇಶ ಮೂರ್ತಿ ಅವರು ಬೆನ್ನುಡಿಯ ಮಾತುಗಳನ್ನು ಬರೆದಿದ್ದಾರೆ.
ಡಾ. ಸಿ.ಆರ್. ಚಂದ್ರಶೇಖರ್ ಅಂತಾರಾಷ್ಟ್ರೀಯ ಖ್ಯಾತಿ ಪಡೆದಿರುವ ರಾಷ್ಟ್ರೀಯ ಮನೋರೋಗ ಮತ್ತು ನರವಿಜ್ಞಾನ ಸಂಸ್ಥೆಯಲ್ಲಿ ಉಪ ಆರೋಗ್ಯ ಅಧೀಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಮನೋವಿಜ್ಞಾನ ಕ್ಷೇತ್ರದಲ್ಲಿ ಸಾಮಾಜಿಕ ಕಳಕಳಿಯುಳ್ಳ ಹಿರಿಯ ವೈದ್ಯರು ರೋಗಿಗಳ ಶುಶ್ರೂಷೆ, ಬೋಧನೆ ಮತ್ತು ತರಬೇತಿ ನೀಡುತ್ತಿರುವುದರ ಜೊತೆಗೆ ಕಳೆದ 30 ವರ್ಷಗಳಿಂದ ನಿರಂತರ ಸೇವೆ ಸಲ್ಲಿಸುತ್ತಿದ್ದಾರೆ. 150 ಕ್ಕೂ ಹೆಚ್ಚು ಮನೋವಿಜ್ಞಾನದ ಬಗ್ಗೆ ಕನ್ನಡದಲ್ಲಿ ರಚಿಸಿರುವ ಇವರ ಹಲವು ಪುಸ್ತಕಗಳು ತೆಲುಗು, ಉರ್ದು, ಗುಜರಾತಿ, ಹಿಂದಿ ಭಾಷೆಗಳಿಗೆ ಅನುವಾದಗೊಂಡಿವೆ. 1000 ಕ್ಕೂ ಹೆಚ್ಚು ಪ್ರೌಢ ಲೇಖನಗಳನ್ನು ಬರೆದಿದ್ದಾರೆ. ...
READ MORE