ಅರ್ಧನಾರೀಶ್ವರ ಕಲ್ಪನೆ ಹುಟ್ಟಿದ್ದೇಗೆ ಎಂಬುದರ ಕುರಿತು ಲೇಖಕ ಜಿ. ಜ್ಞಾನಾನಂದ ಅವರು ಬರೆದ ಲೇಖನಗಳ ಸಂಕಲನವಿದು. ಕೃತಿಯಲ್ಲಿ ಅರ್ಧನಾರೀಶ್ವರ ಪರಿಕಲ್ಪನೆ ಹುಟ್ಟು ಹಾಗೂ ಇತರ ಮಾಹಿತಿಗಳ ಕುರಿತು ವಿವರಿಸಲಾಗಿದೆ
ಲೇಖಕ ಜ್ಞಾನಾನಂದರು ಮೂಲತಃ ಚಿಕ್ಕಬಳ್ಳಾಪುರದ ನಂದಿ ಗ್ರಾಮದವರು. ತಂದೆ- ಎಂ.ಆರ್. ಜಿ. ಶಂಕರ್, ತಾಯಿ ಈಶ್ವರಮ್ಮ. ಪ್ರಾಥಮಿಕ ಶಿಕ್ಷಣವನ್ನು ಚಿಕ್ಕಬಳ್ಳಾಪುರದಲ್ಲಿ ಪಡೆದ ಜ್ಞಾನಾನಂದರು ಆನಂತರ ಮೈಸೂರಿನ ಮಹಾರಾಜ ಕಾಲೇಜಿನಿಂದ ಬಿ.ಎಸ್ಸಿ ಪದವಿ ಪಡೆದು, ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಿಂದ ಎಂ.ಎ. ಪದವಿ ಮತ್ತು ಹಂಪಿಯ ಕನ್ನಡ ವಿಶ್ವವಿದ್ಯಾಲಯಕ್ಕೆ ‘ಕನ್ನಡ ಮಹಾಭಾರತಗಳಲ್ಲಿ ಶಿಲ್ಪ ಮತ್ತು ಶಿಲ್ಪಿ’ ಎಂಬ ಮಹಾಪ್ರಬಂಧ ಮಂಡಿಸಿ, ಪಿ.ಎಚ್.ಡಿ. ಪಡೆದರು. ಚೆನ್ನೈನ ದಕ್ಷಿಣ ಭಾರತ ಹಿಂದಿಸಭಾದಿಂದ ರಾಷ್ಟ್ರಭಾಷಾ ಪ್ರವೀಣ್, ಇಂಡಿಯನ್ ಸ್ಟ್ಯಾಟಿಸ್ಟಿಕಲ್ ಇನ್‌ಸ್ಟಿಟ್ಯೂಟ್‌ನಿಂದ ಸ್ನಾತಕೋತ್ತರ ಸರ್ಟಿಫಿಕೇಟ್ (ಸ್ಟ್ಯಾಟಿಸ್ಟಿಕಲ್ ಅಪ್ಲೈಡ್ ಟು ಇಂಡಸ್ಟ್ರಿ), ಸೂಪರ್‌ವೈಸರಿ ಡೆವಲಪ್‌ಮೆಂಟ್ ಡಿಪ್ಲೊಮ ಮತ್ತು ಡಿಪ್ಲೊಮ ...
READ MORE