ಉತ್ತರ ಕರ್ನಾಟಕದ ಗ್ರಾಮೀಣ ಬದುಕಿನ ಲಯಗಳನ್ನು ಧ್ವನಿಸುವಂತಹ ಅನೇಕ ಕತೆಗಳು ’ಆಟಿಕೆ’ ಕೃತಿಯಲ್ಲಿದೆ. ಜಾತಿ ವ್ಯವಸ್ಥೆಯ ಕರಾಳ ಮುಖಗಳನ್ನು ಅರ್ಥೈಸಿಕೊಂಡಿರುವ ಲೇಖಕರ ಧೋರಣೆ ಅವರ ಕತೆಗಳಲ್ಲಿ ವ್ಯಕ್ತವಾಗಿದೆ. ಬೆಳಗಾವಿ ಪ್ರದೇಶದಲ್ಲಿ ಚಾಲ್ತಿಯಲ್ಲಿರುವ ದೇಸೀ ನುಡಿಗಟ್ಟನ್ನು ಈ ಕೃತಿಯಲ್ಲಿ ಬಳಸಲಾಗಿದೆ. ಚಲನಶೀಲತೆ ಕಳೆದುಕೊಂಡಿರುವ ಹಳ್ಳಿಗಳಲ್ಲಿ ಮೇಲು ಕೀಳು ಎಂಬ ತರತಮ ಧೋರಣೆ ತಾಕಲಾಟಗಳನ್ನು ಲೇಖಕರು ತಮ್ಮ ಕತೆಗಳಲ್ಲಿ ಚಿತ್ರಿಸಿದ್ದಾರೆ.
ಬೆಳಗಾವಿ ಜಿಲ್ಲೆಯ ಘೋಡಗೇರಿಯವರಾದ ಬಸವಣ್ಣೆಪ್ಪ ಕಂಬಾರ ಅವರು ಕನ್ನಡದ ಭರವಸೆಯ ಕತೆಗಾರರಲ್ಲಿ ಒಬ್ಬರು. ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ ಪಠ್ಯಪುಸ್ತಕ ವಿಭಾಗದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಬಸವಣ್ಣೆಪ್ಪಾ ಅವರು ’ಆಟಿಕೆ’, ’ಗಾಂಧಿ ಪ್ರಸಂಗ’ ಮತ್ತು ಗರ್ದಿ ಗಮ್ಮತ್ ಎಂಬ ಮೂರು ಕತಾ ಸಂಕಲನ ಪ್ರಕಟಿಸಿದ್ದಾರೆ. ಅವರ ಆಟಿಕೆ’ ಸಂಕಲನಕ್ಕೆ ಛಂದ ಪುಸ್ತಕ ಬಹುಮಾನ, ಶಿವಮೊಗ್ಗ ಕರ್ನಾಟಕ ಸಂಘದ ಯು.ಆರ್. ಅನಂತಮೂರ್ತಿ ಕತಾ ಪ್ರಶಸ್ತಿ, ಧಾರವಾಡದ ಬೇಂದ್ರೆ ರಾಷ್ಟ್ರೀಯ ಟ್ರಸ್ಟ್‌ನ ಬೇಂದ್ರೆ ಪುಸ್ತಕ ಬಹುಮಾನ ಸಂದಿವೆ. ...
READ MORE