ಸಮಾಜದಲ್ಲಿ ಹೆಣ್ಣಿನ ಬಗ್ಗೆ ಹೆಣೆದಿರುವ ಮಾದರಿ ಬದುಕನ್ನು ತೊರೆದು ಕನಸು ಹೊತ್ತ ಮಹಿಳೆಯ ಬದುಕಿನಲ್ಲಿ ಏನೆಲ್ಲ ಸಮಸ್ಯೆಗಳನ್ನು ಅನುಭವಿಸಬೇಕಾಗಿ ಬರುತ್ತದೆ ಎನ್ನುವ ಕತಾ ಹಂದರ ‘ಅತೃಪ್ತೆ’. ಈ ಸಾಮಾಜಿಕ ಕಾದಂಬರಿಯು ಕನ್ನಡದ ವಾರ ಪತ್ರಿಕೆ ‘ಪ್ರಜಾಮತ’ದಲ್ಲಿ ಪ್ರಕಟಣೆ ಕಂಡು ಜನ ಮೆಚ್ಚುಗೆ ಪಡೆದಿತ್ತು.
ಸಾಹಿತ್ಯ ಲೋಕದಲ್ಲಿ ತಮ್ಮದೇ ಆದ ಸ್ಥಾನ ಹೊಂದಿರುವ ಪ್ರಸಿದ್ಧ ಕತೆ, ಕಾದಂಬರಿಕಾರ್ತಿ ಎ. ಪಿ. ಮಾಲತಿಯವರು ಹುಟ್ಟಿದ್ದು ಭಟ್ಕಳದಲ್ಲಿ 1944 ರ ಮೇ 6 ರಂದು. ಅವರ ಎರಡು ಪತ್ತೆದಾರಿ ಕಾದಂಬರಿಗಳು ಹೊರಬಂದಾದ ಕೇವಲ ಹದಿನೈದರ ವಯಸ್ಸು. ಹಿಂದಿ ಭಾಷೆ ಕಲಿತು ಓದಿದ್ದು ಪ್ರೇಮಚಂದರ ಕಥೆ, ಠಾಕೂರರ ಬಂಗಾಲಿ ಅನುವಾದಗಳು. ಅಧ್ಯಾಪಕರು, ಸಾಹಿತ್ಯಾಸಕ್ತರು, ವಿದ್ಯಾವಂತರಾದ ಪತಿ, ಎ.ಪಿ. ಗೋವಿಂದಭಟ್ಟರಿಂದ ದೊರೆತ ಪ್ರೋತ್ಸಾಹ. ಕೃಷಿ ಜೀವನದ ಜೊತೆಗೆ ಹಳ್ಳಿಯ ಹೆಂಗಸರು ಭತ್ತ ಕುಟ್ಟಲು ಪಡುತ್ತಿದ್ದ ಭವಣೆ ನೋಡಿ ಪ್ರಾರಂಭಿಸಿದ ರೈಸ್‌ಮಿಲ್, ಜೊತೆಗೆ ಹಾಲಿನ ವ್ಯಾಪಾರ. ಜನರೊಡನೆ ಬೆರೆಯುತ್ತಾ ಹೋದಂತೆಲ್ಲ ...
READ MORE