ಕನ್ನಡದಲ್ಲಿ ಪ್ರಮುಖ ಲೇಖಕರಲ್ಲಿ ಒಬ್ಬರಾದ ಸತ್ಯಕಾಮ ಅವರು ಕಾದಂಬರಿ ಮಾತ್ರವಲ್ಲದೆ, ತಂತ್ರಲೋಕದ ಸಂಗತಿಗಳನ್ನು ಅಕ್ಷರಲೋಕಕ್ಕೆ ಕಟ್ಟಿಕೊಟ್ಟವರು. ಕಾಶ್ಮೀರ ಶೈವ ಪಂಥದ ಪ್ರಮುಖ ತಾತ್ವಿಕ ಅಭಿನವಗುಪ್ತ ಸತ್ಯಕಾಮರಿಗೆ ಪ್ರಿಯವಾದ ವ್ಯಕ್ತಿ. ಈ ಕಾದಂಬರಿಯಲ್ಲಿ ಸತ್ಯಕಾಮರು ಅಭಿನವಗುಪ್ತನನ್ನು ಕೇಂದ್ರವಾಗಿಟ್ಟುಕೊಂಡಿದ್ದಾರೆ. ಅಭಿನವಗುಪ್ತನ ಬದುಕನ್ನು ಸೃಜನಶೀಲ ನೆಲೆಯಲ್ಲಿ ಕಟ್ಟಿಕೊಡುವ ಪ್ರಯತ್ನವನ್ನು ಸತ್ಯಕಾಮರು ಈ ಕೃತಿಯಲ್ಲಿ ಮಾಡಿದ್ದಾರೆ.
’ಸತ್ಯಕಾಮ’ ಎಂಬುದು ಅನಂತ ಕೃಷ್ಣಾಚಾರ್ಯ ಶಹಾಪುರ ಅವರ ಕಾವ್ಯನಾಮ. ತಮ್ಮ ಕಾದಂಬರಿ ಹಾಗೂ ತಂತ್ರವಿದ್ಯೆ, ಕೃಷಿಯ ಮೂಲಕ ನಾಡಿನ ಮನೆ ಮಾತಾದವರು ’ಸತ್ಯಕಾಮ’. ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲ್ಲೂಕಿನ ಗಲಗಲಿಯಲ್ಲಿ 1920ರ ಮಾರ್ಚ್ 2ರಂದು ಜನಿಸಿದರು. (ಕೆಲವು ಕಡೆ ಏಪ್ರಿಲ್ 16 ಎಂದು ದಾಖಲಾಗಿದೆ.) ಆರಂಭಿಕ ಶಿಕ್ಷಣವನ್ನು ಗಲಗಲಿಯಲ್ಲಿ ಪಡೆದ ಅವರು ಮುಲ್ಕಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ನಂತರ ಶಾಲೆಯ ಗೊಡವೆಗೇ ಹೋಗದೆ ಒಂದು ವರ್ಷ ಗಲಗಲಿಯಲ್ಲಿಯೇ ಕಳೆದರು. 1935ರಲ್ಲಿ ಬಾಗಲಕೋಟೆಯ ಸಕ್ರಿ ಹೈಸ್ಕೂಲಿಗೆ ಸೇರಿದರಾದರೂ ಓದು ಮುಂದುವರಿಸಲಿಲ್ಲ. ಭಾರತದಲ್ಲಿ ಉಪ್ಪಿನ ಸತ್ಯಾಗ್ರಹ ನಡೆಯುತ್ತಿದ್ದ 1930-31ರಲ್ಲಿ ಬಾಲಕ ಅನಂತ ...
READ MORE