’ಯಾವಾಗ ಆಳುವ ಸರ್ಕಾರಗಳು ತಾವು ಸುರಕ್ಷಿತವೆಂದು ಭಾವಿಸುತ್ತವೆಯೋ ಆಗ ಅಭಿವ್ಯಕ್ತಿ ಸ್ವಾತಂತ್ರ್ಯ ಇರುತ್ತದೆ’ ಎನ್ನುವ ಚಿಂತಕ ಬರ್ಟಂಡ್ ರಸೆಲ್ ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಹೇಳಿದ್ದಾನೆ. ಅಭಿವ್ಯಕ್ತಿಯ ವಿವಿಧ ಆಯಾಮಗಳನ್ನು ಒಳಗೊಂಡ ಲೇಖನಗಳನ್ನು ಈ ಪುಸ್ತಕದಲ್ಲಿ ಪ್ರಕಟಿಸಲಾಗಿದೆ.
ಹೋರಾಟಗಾರ ಚೆಗೆವಾರ ಅಭಿವ್ಯಕ್ತಿಯ ಮಹತ್ವದ ಬಗ್ಗೆ ಹೀಗೆ ಹೇಳಿದ್ದಾರೆ ’ನೀವು ಹೂವುಗಳನ್ನು ಕಿತ್ತುಹಾಕಬಹುದು ಆದರೆ ಮತ್ತೆ ಹೂವರಳಿಸಲಿರುವ ವಸಂತವನಲ್ಲ. ವ್ಯಕ್ತಿಗಳನ್ನು ಕೊಲ್ಲಬಹುದು, ಅವರು ಬಿತ್ತಿದ ಯೋಚನೆಗಳನ್ನಲ್ಲ’.
-
ಲೇಖಕಿ, ಕವಯತ್ರಿ ಎಚ್.ಎಸ್.ಅನುಪಮಾ ಅವರು ವೃತ್ತಿಯಲ್ಲಿ ವೈದ್ಯೆ. ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಕವಲಕ್ಕಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ವೃತ್ತಿಯ ಜೊತೆಗೆ ಸಾಹಿತ್ಯ ಕ್ಷೇತ್ರದಲ್ಲಿಯೂ ತಮ್ಮನ್ನು ತೊಡಗಿಸಿಕೊಂಡಿರುವ ಅವರು ಕಾಡುಹಕ್ಕಿಯ ಹಾಡು, ಸಹಗಮನ, ಬುದ್ಧ ಚರಿತೆ (ಖಂಡ ಕಾವ್ಯ), ನೆಗೆವ ಪಾದದ ಜಿಗಿತ, ಸಬರಮತಿ- ನೀಳ್ಗವಿತೆ ಎಂಬ ಐದು ಕವನ ಸಂಕಲನಗಳು, ಹೂವರಳಿದ್ದಕ್ಕೆ ಯಾಕೆ ಸಾಕ್ಷಿ?, ಚಿವುಟಿದಷ್ಟೂ ಚಿಗುರು, ಕೋವಿಡ್: ಡಾಕ್ಟರ್ ಡೈರಿ - ಗ್ರಾಮಭಾರತದ ಕಥೆಗಳು ಎಂಬ ಮೂರು ಕಥಾಸಂಕಲನಗಳು, ಡಾ. ಬಾಬಾಸಾಹೇಬ್ ಅಂಬೇಡ್ಕರ್ – ಕಿರು ಜೀವನ ಚರಿತ್ರೆ , ಮೋಚಕನ ಹೆಜ್ಜೆಗಳು - ಡಾ. ...
READ MORE