ಲೇಖಕ ಟಿ.ಎಸ್. ಗೋಪಾಲ್ ಅವರು ಮಹಾರಾಜ ಕಾಲೇಜಿನಲ್ಲಿ ಅಧ್ಯಾಪಕರಾಗುವುದಕ್ಕೂ ಮುಂಚೆ ಅದೇ ಭವ್ಯ ಕಟ್ಟಡದಲ್ಲಿ ತಿರುಗಾಡಿ, ಗೋಡೆಗಾತು ಕುಳಿತು ವಿದ್ಯಾರ್ಥಿಯಾಗಿ ಒಂದಿಷ್ಟು ಅನುಭವ ಪಡೆದವರು. ಅಲ್ಲಿ ವಿಜ್ಞಾನದ ವಿಭಾಗದಲ್ಲಿ ಕಾರ್ಯ ನಿರ್ವಹಿಸಿದ ಮತ್ತು ವಿದ್ಯಾರ್ಥಿ ದಿನಗಳ ಅನುಭವಗಳನ್ನು ಲೇಖನಗಳ ಮೂಲಕ ಈ ಕೃತಿಯಲ್ಲಿ ತೆರೆದಿಟ್ಟಿದ್ದಾರೆ.
ಲೇಖಕ ಟಿ. ಎಸ್. ಗೋಪಾಲ್ ಅವರ ಹೆಸರು ತಿರು ಶ್ರೀನಿವಾಸಾಚಾರ್ಯ ಗೋಪಾಲ್. ಕನ್ನಡ ಭಾಷೆ, ಸಾಹಿತ್ಯ, ವನ್ಯಜೀವನ, ವಿಜ್ಞಾನ ಕುರಿತ ಪುಸ್ತಕಗಳನ್ನು ಬರೆದಿದ್ದಾರೆ. ಅವರ 'ಕಾಡು ಕಲಿಸುವ ಪಾಠ' ಕೃತಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿ ಪುಸ್ತಕ ಬಹುಮಾನ (2013) ದೊರೆತಿದೆ. ಮೈಸೂರು ವಿಶ್ವವಿದ್ಯಾಲಯದಿಂದ ಬಿ. ಎ. ಹಾಗೂ ಎಂ. ಎ. ಪದವಿ (ಚಿನ್ನದ ಪದಕ) ಪಡೆದಿರುವ ಅವರು ದಕ್ಷಿಣ ಕೊಡಗಿನ ಶ್ರೀಮಂಗಲ ಪದವಿಪೂರ್ವ ಕಾಲೇಜಿನಲ್ಲಿ ಕನ್ನಡ ಉಪನ್ಯಾಸಕರಾಗಿ, ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿದ್ದಾರೆ. ಕೊಡಗು ಜಿಲ್ಲಾ ಪದವಿಪೂರ್ವ ಕಾಲೇಜುಗಳ ಪ್ರಾಚಾರ್ಯರ ಸಂಘದ ಸ್ಥಾಪಕ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ ಅವರು ...
READ MORE