'ಅಗೆದಷ್ಟೂ ನಕ್ಷತ್ರ' ಭೂಮಿಯ ಜೊತೆಗಿನ ಮನುಷ್ಯನ ಅನುಬಂಧವನ್ನು ಕುರಿತು ಆತ್ಮದ ಭಾಷೆಯಲ್ಲಿ ಮಾತನಾಡುವ ಅಪರೂಪದ ಕಾದಂಬರಿ.
ಪತ್ನಿ ತೀರಿದ ಬಳಿಕ ಪ್ರೊಫೆಸರ್‌ಗೆ ಆತ್ಮೀಯರಾದ ಜಲಜ ಮೇಡಂ, ಮನೆಕೆಲಸದ ಸೀತಮ್ಮ, ಮದುವೆಯೇ ಆಗದೆ ಕುಟುಂಬದ ಸರ್ವಸದಸ್ಯರ ಸಂಸಾರದ ಸೇವೆಯಲ್ಲೇ ಸಾರ್ಥಕ್ಯ ಕಂಡ ಪದ್ದಜ್ಜಿ, ಮದುವೆಯಾಗಿ ಎರಡು ತಿಂಗಳಾದರೂ ಗಂಡನ ಸುಖ ಕಾಣದೆ ವಿಧವೆಯಾದ ರಾಜಿ ಹೀಗೆ ಸಂಬಂಧಗಳ ಆಕರ್ಷಣೆ– ವಿಕರ್ಷಣೆಯನ್ನು ಶೋಧಿಸುತ್ತಾ ಕಾದಂಬರಿ ಮುಂದುವರಿಯುತ್ತದೆ.
ಕಾದಂಬರಿಯ ನಿಜವಾದ ಉತ್ಖನನ ಆರಂಭವಾಗುವುದು ಮಂಡ್ಯ ಜಿಲ್ಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಐವರು ರೈತ ಪಾತ್ರಗಳ ಪ್ರವೇಶದೊಂದಿಗೆ. ನಾಗರಿಕತೆ ಹುಟ್ಟುವುದಕ್ಕೂ ಮುನ್ನವೇ ಈ ಭೂಮಿ ಮನುಷ್ಯನ ಅನುಬಂಧ ಹುಟ್ಟಿದೆ. 4000 ವರ್ಷಗಳ ಹಿಂದಿನ ನಾಗರಿಕತೆಯನ್ನು ಶೋಧಿಸಲು ಉತ್ಖನನ ನಡೆದ ಧೊಲಾವೀರಾ, ಲೋಥೆಲ್ ಮತ್ತು ರೈತರು ಆತ್ಮಹತ್ಯೆ ಮಾಡಿಕೊಂಡ ಮಂಡ್ಯದ ಬಳಿಯ ಹಳ್ಳಿಗಳಲ್ಲಿ ಓಡಾಡಿರುವ ಲೇಖಕಿ, ಕಂಡುಕೊಂಡ ಭೂತಾಯಿಯ ಕಟು ಸತ್ಯಗಳ ಕುರಿತು ಈ ಕೃತಿಯಲ್ಲಿ ವಿವರಗಳನ್ನು ನೀಡಿದ್ದಾರೆ.
ಲೇಖಕಿ, ಕತೆಗಾರ್ತಿ ಮತ್ತು ಅನುವಾದಕಿ ಸುಮಂಗಲಾ ಶಿವಮೊಗ್ಗದ ಸಾಗರದವರು. "ಚರ್ನೋಬಿಲ್ ಪ್ರಾರ್ಥನೆ" ಅವರ ಇತ್ತೀಚಿನ ಅನುವಾದ ಕೃತಿ. “ಹನ್ನೊಂದನೇ ಅಡ್ಡರಸ್ತೆ” ಇವರಿಗೆ ಹೆಸರು ತಂದುಕೊಟ್ಟ ಕಥಾ ಸಂಕಲನ. ಪ್ರಸ್ತುತ ಬೆಂಗಳೂರಿನಲ್ಲಿ ನೆಲೆಸಿರುವ ಅವರು ಸಾಹಿತ್ಯ ಕ್ಷೇತ್ರದಲ್ಲಿ ಕಾಲಿಡಲು ಬಾಲ್ಯದಲ್ಲಿ ಕಂಡ ಅಪ್ಪನ ಪುಸ್ತಕ-ಪ್ರೀತಿಯೇ ಕಾರಣ ಎನ್ನುತ್ತಾರೆ. ಅವರ ಮೊದಲಕತೆ ಸೀತಾಳೆ ಹೂ ಕನ್ನಡ ಕಥಾಲೋಕ ಎದ್ದುನಿಂತು ಗಮನಿಸುವಷ್ಟು ಪರಿಣಾಮಕಾರಿಯಾಗಿದೆ. ಕನ್ನಡದ ಹಲವಾರು ಪ್ರತಿಷ್ಠಿತ ನಿಯತಕಾಲಿಕಗಳಲ್ಲಿ ಪ್ರಕಟಗೊಂಡ ಹಲವು ಕತೆಗಳು ಸೀತಾಳೆ ಹೂ ಮತ್ತು ಇತರ ಕಥೆಗಳು ಎಂಬ ಇವರ ಮೊದಲ ಕಥಾಸಂಕಲನದಲ್ಲಿ ಕಾಣಿಸಿಕೊಂಡವು. ತದನಂತರ 2005ರಲ್ಲಿ ಜುಮುರು ...
READ MORE