ಸೋದರಿ ನಿವೇದಿತಾ ಅವರು ವಿದೇಶದಿಂದ ಬಂದು ಭಾರತೀಯ ಆಧ್ಯಾತ್ಮವನ್ನು ಅರಿತವರು. ಭಾರತೀಯರ ಸೇವೆಗೆ ಅದರಲ್ಲೂ ಮಹಿಳಾ ಜಾಗೃತಿಗಾಗಿ ತಮ್ಮನ್ನು ಅರ್ಪಿಸಿಕೊಂಡ ಧೀಮಂತ ಮಹಿಳೆ. ಸ್ವಾಮಿ ವಿವೇಕಾನಂದರ ಪ್ರಭಾವಕ್ಕೊಳಗಾದ ನಿವೇದಿತಾ ಅವರು, ಹಿಂದೂ ಧರ್ಮವನ್ನು ಅರ್ಥೈಸಿಕೊಂಡು, ಅದರ ಆದರ್ಶಗಳಲ್ಲಿ ತಮ್ಮ ಬಾಳುವೆಯನ್ನು ನಡೆಸಿದ, ಭಾರತಕ್ಕೆ ನೀಡಿರುವ ಕೊಡುಗೆಯನ್ನು ಇಲ್ಲಿ ಲೇಖಕರು ನೀಡಿದ್ದಾರೆ.
ಈ ಕೃತಿಯಲ್ಲಿ ಮೂರು ಭಾಗಗಳಿದ್ದು, ಭೂಮಿಕೆಯಲ್ಲಿ ನಿವೇದಿತಾ ಜೀವಿತ ಕಾರ್ಯದ ಸಾಂದರ್ಭಿಕತೆಯ ವಿವರ, ಭಾಗ –2 ರಲ್ಲಿ ಜೀವನ ಪಯಣ ಹಾಗೂ ಭಾಗ –3ರ ಅನುಬಂಧದಲ್ಲಿ ಜೀವನ ಪಥವನ್ನು ತಿಳಿಸಲಾಗಿದೆ.
ನಾಡೋಜ ಎಸ್.ಆರ್.ರಾಮಸ್ವಾಮಿ ಅವರು ಪತ್ರಕರ್ತರಾಗಿ, ಲೇಖಕರಾಗಿ, ಚಿಂತಕರಾಗಿ, ವಿಮರ್ಶಕರಾಗಿ, ಸಾಮಾಜಿಕ ಕಾರ್ಯಕರ್ತರಾಗಿ ನಾಡಿನಲ್ಲಿ ಸುಪರಿಚಿತರು. ಮೂಲತಃ ಬೆಂಗಳೂರಿನವರೇ ಆದ ರಾಮಸ್ವಾಮಿ ಅವರು ಕನ್ನಡ, ತೆಲುಗು, ಸಂಸ್ಕೃತ, ಹಿಂದಿ, ಇಂಗ್ಲಿಷ್, ಜರ್ಮನ್, ಫ್ರೆಂಚ್ ಭಾಷೆಗಳಲ್ಲಿ ಪ್ರಾವೀಣ್ಯತೆ ಹೊಂದಿದವರು. 1950ರ ದಶಕದಲ್ಲಿ ಪತ್ರಿಕೋದ್ಯಮ ಪ್ರವೇಶಿಸಿದ ಇವರು, 1972 ರಿಂದ 79ರ ವರೆಗೆ ಸುಧಾ ವಾರಪತ್ರಿಕೆಯ ಮುಖ್ಯ ಉಪಸಂಪಾದಕರಾಗಿ ಸೇವೆ ಸಲ್ಲಿಸಿದರು. 1980ರಲ್ಲಿ ರಾಷ್ಟೋತ್ಥಾನ ಸಾಹಿತ್ಯ ಮತ್ತು ಉತ್ಥಾನ ಮಾಸಪತ್ರಿಕೆಯ ಗೌರವ ಪ್ರಧಾನ ಸಂಪಾದಕರಾದ ಇವರು ಇಂದಿಗೂ ಆ ಹುದ್ದೆಯಲ್ಲಿ ಸೇವಾನಿರತರಾಗಿದ್ದಾರೆ. ಕನ್ನಡ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಸುಮಾರು 55 ಕ್ಕೂ ...
READ MORE