ಅಹಲ್ಯಬಾಯಿ ಹೋಳ್ಕರ್ ಜೀವನಚರಿತ್ರೆ ಕೃತಿಯನ್ನು ಲೇಖಕಿ ವೈ.ಕೆ. ಸಂಧ್ಯಾ ಅವರು ರಚಿಸಿದ್ದಾರೆ. ಈ ಕೃತಿಯಲ್ಲಿ ಭಾರತದ ವೀರ ಮಹಿಳೆಯರ ಪಂಕ್ತಿಯಲ್ಲಿ ಬೆಳಗುವ ರಾಣಿ. ಸಾಮಾನ್ಯರ ಮನೆಯಲ್ಲಿ ಹುಟ್ಟಿ ರಾಣಿಯಾದಳು. ಮತ್ತೆ ಮತ್ತೆ ತನಗೆ ಅತ್ಯಂತ ಪ್ರೀತಿಪಾತ್ರರ ಸಾವನ್ನು ಕಂಡಳು, ಶತ್ರುಗಳ ಆಕ್ರಮಣವನ್ನು ಎದುರಿಸಿದಳು. ಎಲ್ಲ ದುಃಖ, ಆಪತ್ತುಗಳನ್ನು ಎದುರಿಸಿ ರಾಜ್ಯವನ್ನು ಕಾಪಾಡಿದಳು. ಪ್ರಜೆಗಳಿಗೆ ತಾಯಿಯಾದಳು ಎಂದು ಅಹಲ್ಯಬಾಯಿ ಹೋಳ್ಕರ್ ಅವರ ಕುರಿತಾಗಿ ಈ ಕೃತಿಯಲ್ಲಿ ವಿವರಿಸಲಾಗಿದೆ. ಅಹಲ್ಯಬಾಯಿ ಹೋಳ್ಕರ್ ಅವರ ಬಾಲ್ಯ ಜೀವನ, ಜೀವನದ ಏಳು-ಬೀಳುಗಳು, ಪ್ರಜೆಗಳ ಜೊತೆಗೆ ಹೊಂದಿದ್ದ ಅವಿನಾಭಾವ ಸಂಬಂಧ ಹೀಗೆ ಅವರ ಜೀವನದ ವಿವಿಧ ಆಯಾಮಗಳನ್ನು ಲೇಖಕಿ ಇಲ್ಲಿ ಸರಳ ಕನ್ನಡ ಭಾಷೆಯಲ್ಲಿ ವಿವರಿಸಿದ್ದಾರೆ.
ಕಳೆದ 52 ವರ್ಷಗಳಿಂದ ಕನ್ನಡ ಸಾರಸ್ವತಲೋಕದಲ್ಲಿ ಜನಪ್ರಿಯ ಲೇಖಕಿಯಾಗಿ ಖ್ಯಾತಿ ಪಡೆದಿರುವ ವೈ.ಕೆ.ಸಂಧ್ಯಾ ಶರ್ಮ ಅವರು ವೈ.ಕೆ. ಕೇಶವಮೂರ್ತಿ ಮತ್ತು ವೈ.ಕೆ. ಅಂಬಾಬಾಯಿಯವರ ಪುತ್ರಿಯಾಗಿ ಬೆಂಗಳೂರಿನಲ್ಲಿ ಜನಿಸಿದರು. ಪ್ರೌಢಶಾಲೆಯಲ್ಲಿದ್ದಾಗಲೇ ಬರವಣಿಗೆ ಆರಂಭಿಸಿದ ಇವರು, ಬೆಂಗಳೂರಿನ ಕರ್ನಾಟಕ ವಾರ್ತಾ ಇಲಾಖೆಯಲ್ಲಿ ಹಿರಿಯ ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದರು. ಪ್ರಸ್ತುತ ಫ್ರೀಲಾನ್ಸ್ ಜರ್ನಲಿಸ್ಟ್ ಆಗಿ ವಿವಿಧ ಪತ್ರಿಕೆಗಳಲ್ಲಿ ನೃತ್ಯ-ನಾಟಕಗಳ ಕಲಾ ವಿಮರ್ಶಕಿಯಾಗಿ, ಅಂಕಣ ಬರಹಗಾರ್ತಿಯಾಗಿ ಕಾರ್ಯನಿರತರಾಗಿದ್ದಾರೆ. ಪ್ರಜಾಮತ ವಾರಪತ್ರಿಕೆ (1975-76) , ಪ್ರಜಾಪ್ರಭುತ್ವ ವಾರಪತ್ರಿಕೆಗಳಲ್ಲಿ (1977-1980) ಮತ್ತು ಇಂಚರ (1980-82) ಮಾಸಪತ್ರಿಕೆಯಲ್ಲಿ ಸಹಾಯಕ ಸಂಪಾದಕಿಯಾಗಿ ಸೇವೆ ಸಲ್ಲಿಸಿರುವ ಅನುಭವ ಇವರಿಗಿದೆ. ಪ್ರಸ್ತುತ ಅಂತರ್ಜಾಲದ ‘’ ...
READ MORE