ಅಕಾಕಿ ಕೋಟು

Author : ಚನ್ನಕೇಶವ

Pages 202

₹ 149.00




Year of Publication: 2022
Published by: ಥಿಯೇಟರ್ ತತ್ಕಾಲ್ ಬುಕ್ಸ್
Address: ಬೆಂಗಳೂರು

Synopsys

‘ಅಕಾಕಿ ಕೋಟು’ ಕೃತಿಯು ಚನ್ನಕೇಶವ ಅವರ ನಾಟಕಸಂಕಲನವಾಗಿದೆ. ಈ ಕೃತಿಗೆ ಮುನ್ನುಡಿ ಬರೆದಿರುವ ಮೌನೇಶ ಬಡಿಗೇರ ಅವರು, ಚನ್ನಕೇಶವ ಬರಿದೆ ಮನರಂಜನೆಯನ್ನು ನೀಡುವ ನಾಟಕಗಳನ್ನು ಆಯ್ಕೆ ಮಾಡಿಕೊಂಡಿಲ್ಲ. ಎಲ್ಲವೂ ಆಂತರ್ಯದಲ್ಲಿ ಆಯಾ ಕಾಲದ ಏರಿಳಿತಗಳನ್ನು ಧ್ವನಿಸುವಂತಹ ನಾಟಕಗಳನ್ನೇ ಆರಿಸಿಕೊಂಡು ಬರೆದುಕೊಂಡಿದ್ದಾರೆ ಮತ್ತು ಈ ಎಲ್ಲಾ ನಾಟಕಗಳಲ್ಲಿ ಬರೀ ನಟರೇ ಮುಖ್ಯವಾಗಿರದೆ ನಾಟಕೀಯತೆಯೇ ಪ್ರಧಾನವಾಗಿವೆ. ಸಂಗೀತ, ಸಂಗೀತದ ಮೇಳ, ಸೂತ್ರಧಾರ, ಅವರ ಹಿಮ್ಮೇಳ, ಇವೆಲ್ಲವೂ ಗ್ರೀಕ್ ನಾಟಕಗಳಲ್ಲಿ ಹಾಗೂ ನಮ್ಮ ಜನಪದ ನಾಟಕಗಳಲ್ಲಿ ಕಾಣಬಹುದಾದ ಅತ್ಯಂತ ಜನಪ್ರಿಯ ಹಾಗೂ ಅತ್ಯಂತ ಯಶಸ್ವೀ ನಾಟಕೀಯ ತಂತ್ರಗಳಾಗಿವೆ. ಈ ತಂತ್ರಗಳನ್ನು ಚನ್ನಕೇಶವ ಅವರು ತಮ್ಮ ಬಹುತೇಕ ನಾಟಕಗಳಿಗೆ ಬಹಳ ಯಶಸ್ವಿಯಾಗಿ ಕಸಿಮಾಡಿಕೊಂಡಿದ್ದಾರೆ ಎಂದಿದ್ದಾರೆ.

About the Author

ಚನ್ನಕೇಶವ

ಕನ್ನಡ ರಂಗಭೂಮಿಯ ಪೂರ್ಣಪ್ರಮಾಣದ ಕೃಷಿಕ ಚನ್ನಕೇಶವ. ನಾಟಕ ಆಡುವುದು, ಆಡಿಸುವುದು,ಆಡುವುದನ್ನು ಕಲಿಸುವುದು, ನಾಟಕ ವಿನ್ಯಾಸ, ರಸಗ್ರಹಣ ಹೀಗೆ ತನ್ನ ಪೂರ್ಣ ಹೊತ್ತನ್ನು ರಂಗಭೂಮಿಯಲ್ಲೇ ಕಳೆಯುತ್ತಿದ್ದವರು ಅವರು. ಸಾಹಿತ್ಯದ ಮೇಲೂ ಹೆಚ್ಚಿನ ಆಸಕ್ತಿಯನ್ನು ಹೊಂದುಕೊಂಡಿದ್ದ ಇವರು, ನಾಟಕ ಸಂಬಂಧಿ ಕೃತಿಗಳನ್ನೂ ಬರೆದಿರುತ್ತಾರೆ. ಅವುಗಳಲ್ಲಿ ಪ್ರಮುಖ ಕೃತಿಗಳು, ತೂಗುತೊಟ್ಟಿಲು, ಅಕಾಕಿ ಕೋಟು ಮತ್ತು ಇತರ ನಾಟಕಗಳು - ಭಾಗ 1, ಲೋಕೋತ್ತಮೆ ಮತ್ತು ಕಾಲಯಾತ್ರೆ ಹಾಗೂ ರಂಗಪುರಾಣ. ...

READ MORE

Related Books