‘ಅಕ್ಕಿಕಾಳು ನಕ್ಕಿತಮ್ಮಾ’ ಲೇಖಕ ಬಿದರಹಳ್ಳಿ ನರಸಿಂಹಮೂರ್ತಿ ಅವರ ಕವನ ಸಂಕಲನ. ಬದುಕಿನ ತೀವ್ರತೆಗೆ ತುಡಿವ ಕವನಗಳ ಮೂಲಕ ವಿಭಿನ್ನ ಲೋಕವೊಂದನ್ನು ಸೃಷ್ಟಿಸುವ ಕವಿ ಬಿದರಹಳ್ಳಿ ನರಸಿಂಹಮೂರ್ತಿ. ಇಲ್ಲಿಯ ಕವನಗಳು ಅವರ ಮಾಗಿದ ಅನುಭವದೊಂದಿಗೆ ಹೊಸ ಚೈತ್ಯವನ್ನೂ ತುಂಬಿಕೊಂಡು ಓದುಗರನ್ನು ಸೆಳೆಯುತ್ತವೆ. ಸದಾ ಜಾಗರೂಕರಾಗಿ ಕವನ ನೇಯುವ ನರಸಿಂಹಮೂರ್ತಿ ಅವರು ಸುತ್ತಲಿನ ಸಮಾಜಕ್ಕೆ ಸ್ಪಂದಿಸುವ ಕವಿತೆಗಳನ್ನು ಈ ಕೃತಿಯಲ್ಲಿ ಸಂಕಲನಗೊಳಿಸಿದ್ದಾರೆ.
ಕವಿ, ಕತೆಗಾರ, ಕಾದಂಬರಿಕಾರ, ನಾಟಕಕಾರ, ವಿಮರ್ಶಕ, ಸಂಪಾದಕ, ಅನುವಾದಕ ಹೀಗೆ ಸಾಹಿತ್ಯ ಕ್ಷೇತ್ರದ ಹಲವು ಪ್ರಕಾರಗಳಲ್ಲಿ ಕೃಷಿ ಮಾಡಿರುವ ಬಿದರಹಳ್ಳಿ ನರಸಿಂಹಮೂರ್ತಿ ಅವರು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ಹೊಳೆಹೊನ್ನೂರಿನಲ್ಲಿ. ಇಂಗ್ಲಿಷ್ ಉಪನ್ಯಾಸಕರಾಗಿ ಸರ್ಕಾರಿ ಸೇವೆಗೆ ಸೇರಿ ಪ್ರಿನ್ಸಿಪಲ್ ಆಗಿ ನಿವೃತ್ತರಾಗಿ ಹೊನ್ನಾಳಿಯಲ್ಲೇ ನೆಲೆಸಿದ್ದ ಬಿದರಹಲ್ಳಿಯವರು ಹೆಚ್ಚೂ ಕಡಿಮೆ ಕನ್ನಡ ಸಾಹಿತ್ಯದ ಎಲ್ಲ ಪ್ರಕಾರಗಳಲ್ಲೂ ಕೃಷಿಮಾಡಿದ್ದಾರೆ. ಅವರ ಪ್ರಕಟಿತ ಕೃತಿಗಳು: ಕಾವ್ಯ: ಕಾಡಿನೊಳಗಿದೆ ಜೀವ(1979), ಸೂರ್ಯದಂಡೆ(1996), ಅಕ್ಕಿಕಾಳು ನಕ್ಕಿತಮ್ಮ(2001), ಭಾವಕ್ಷೀರ(2006), ಅಕ್ಕನೆಂಬ ಅನುಭಾವಗಂಗೆ(2017) ಕಥಾಸಂಕಲನ: ಶಿಶು ಕಂಡ ಕನಸು(1993, 2005), ಹಂಸೆ ಹಾರಿತ್ತು(2000, 2010), ನೀರಾಳ ಸೊಲ್ಲು(2017), ಸಸಿಯ ...
READ MORE