ವಿಶ್ವವಿಖ್ಯಾತ ವಿಜ್ಞಾನಿ ಐನ್‌ಸ್ಟೈನ್ ತನ್ನ ಸುದೀರ್ಘ ಜೀವಿತಾವಧಿಯಲ್ಲಿ ಗಣ್ಯರ ಮತ್ತು ಸಾಮಾನ್ಯರ ಜೊತೆ ಸಮಾನವಾಗಿಯೇ ಪತ್ರ ವ್ಯವಹಾರ ನಡೆಸಿದ್ದರು. ಕೆಲವೇಳೆ ಅವರು ಮಹದ್ಘಟನೆಗಳನ್ನು ಕುರಿತು ಪ್ರಸ್ತಾವಿಸಿದರೆ ಇತರ ವೇಳೆ ದೈನಂದಿನ ವಿಷಯಗಳನ್ನು ಕುರಿತು ಚರ್ಚಿಸಿದರು. ಉದಾಹರಣೆಗೆ, ಜೀವನ ವೃತ್ತಿಯನ್ನು ಕುರಿತು, ತನ್ನ ಸಂಶೋಧನೆಗಳ ಕುರಿತು, ವಿಜ್ಞಾನದ ಕುರಿತು ಹೀಗೆ ಅವರು ಬರೆದ ಕೆಲವು ಪತ್ರಗಳನ್ನು ಕನ್ನಡಕ್ಕಿಳಿಸಿ ಈ ಕೃತಿಯಲ್ಲಿ ನೀಡಲಾಗಿದೆ.
ಜಗತ್ತಿನ ಶ್ರೇಷ್ಠ ವಿಜ್ಞಾನಿಯೊಬ್ಬನ ಮಾನವೀಯ ವ್ಯಕ್ತಿತ್ವ ಈ ಪುಸ್ತಕದಲ್ಲಿ ಅನಾವರಣಗೊಂಡಿದೆ.
ಜಿ.ಟಿ.ನಾರಾಯಣ ರಾವ್ ಅವರು ಪುತ್ತೂರಿನ ಸಮೀಪದ ಮರಿಕೆ ಗ್ರಾಮದಲ್ಲಿ 30-01-1926ರಂದು ಜನಿಸಿದರು. ಮದ್ರಾಸ್ ವಿಶ್ವವಿದ್ಯಾಲಯದಿಂದ ಗಣಿತದಲ್ಲಿ ಎಂ.ಎ. ಪದವಿ ಪಡೆದಿರುವ ಇವರು ಎನ್.ಸಿ.ಸಿ. ಅಧಿಕಾರಿಯಾಗಿಯೂ ಕರ್ತವ್ಯ ನಿರ್ವಹಿಸಿದ್ದಾರೆ. ಕರ್ನಾಟಕ ಸಂಗೀತ ಹಾಗೂ ಕನ್ನಡ ಅಭಿಜಾತ ವಾಙ್ಙಯ ಕುರಿತು ಅಪಾರ ಆಸಕ್ತಿ ಹೊಂದಿದ್ದಾರೆ, ಸರಕಾರಿ ಕಾಲೇಜುಗಳಲ್ಲಿ ಅಧ್ಯಾಪನ ಮತ್ತೆ ಮೈಸೂರು ವಿಶ್ವವಿದ್ಯಾಲಯದ ಕನ್ನಡ ವಿಶ್ವಕೋಶದ ವಿಜ್ಞಾನ ಸಂಪಾದಕರಾಗಿಯೂ ಕಾರ್ಯ ನಿರ್ವಹಿಸಿದ್ದಾರೆ. ನೊಬೆಲ್ ಪ್ರಶಸ್ತಿ ಪುರಸ್ಕೃತರಾದ ಸಿ.ವಿ. ರಾಮನ್‌ರನ್ನು ಬೆಂಗಳೂರಿನಲ್ಲಿಯೂ, ಎಸ್. ಚಂದ್ರಶೇಖರ್‌ರನ್ನು ಚಿಕಾಗೋದಲ್ಲಿಯೂ ಭೇಟಿಮಾಡಿ ವೈಜ್ಞಾನಿಕ ಜೀವನ ಚರಿತ್ರೆಗಳನ್ನು ಬರೆದಿದ್ದಾರೆ. ಕನ್ನಡಕ್ಕೆ ವಿಪುಲ ಸ್ವತಂತ್ರ ವೈಜ್ಞಾನಿಕ ಕೃತಿಗಳನ್ನೂ, ಕೆಲವು ...
READ MORE