ಡೈನಾಮೆಟ್ ಕಂಡುಹಿಡಿದ ಆಲ್ಫ್ರೆಡ್ ನೊಬೆಲ್ ಅಷ್ಟಕ್ಕೆ ಮಾತ್ರ ಸೀಮಿತವಾಗಲಿಲ್ಲ. 1895ರ ನವೆಂಬರ್ 27 ರಂದು ತನ್ನ ಆಸ್ತಿಯ ಶೇ. 94 ರಷ್ಟು ಭಾಗದ (ಸ್ವೀಡಿಶ್ ಕ್ರೋನೋರ್ 31,225,000) ಹಣವನ್ನು ಉಪಯೋಗಿಸಿಕೊಂಡು ‘ನೊಬೆಲ್ ಪಾರಿತೋಷಕ‘ವನ್ನು ಸ್ಥಾಪಿಸಿದ ಇವರ ಜೀವನ ಚಿತ್ರಣವನ್ನು ಲೇಖಕ ರೋಹಿತ್ ಚಕ್ರವರ್ತಿ ಅವರು ಸರಳವಾಗಿ ಸಂಕ್ಷಿಪ್ತವಾಗಿ ನೀಡಿದ್ದಾರೆ. ಮಕ್ಕಳನ್ನು ಗಮನದಲ್ಲಿಟ್ಟುಕೊಂಡು ರಚಿಸಿರುವ ಈ ಕೃತಿಯನ್ನು ನಾ. ಸೋಮೇಶ್ವರ ಸಂಪಾದಿಸಿದ್ದಾರೆ.
ರೋಹಿತ್ ಚಕ್ರತೀರ್ಥ, ಓದಿದ್ದು ವಿಜ್ಞಾನ, ಮುಖ್ಯವಾಗಿ ಗಣಿತ. ಬೆಂಗಳೂರಿನಲ್ಲಿ ನಾಲ್ಕು ವರ್ಷ ಉಪನ್ಯಾಸಕರಾಗಿ ಕಾಲೇಜುಗಳಲ್ಲಿ ಪಾಠ ಮಾಡಿ, ಈಗ ಬಹುರಾಷ್ಟ್ರೀಯ ಕಂಪೆನಿಯಲ್ಲಿ ಉದ್ಯೋಗಿ. ಬರವಣಿಗೆಯನ್ನು ಹವ್ಯಾಸವಾಗಿಸಿಕೊಂಡು, ಹಲವು ಪತ್ರಿಕೆಗಳಲ್ಲಿ ಅಂಕಣಗಳನ್ನು ಬರೆದಿದ್ದಾರೆ. ಜೊತೆಗೆ ವಿಜ್ಞಾನ, ಗಣಿತ, ವ್ಯಕ್ತಿಚಿತ್ರ, ಮಕ್ಕಳ ಕತೆ ಸೇರಿದಂತೆ ಹಲವು ಪ್ರಕಾರಗಳಲ್ಲಿ ಇದುವರೆಗೆ 13 ಪುಸ್ತಕಗಳು ಪ್ರಕಟಣೆಯಾಗಿವೆ. ಉದ್ಯೋಗ ಮತ್ತು ಬರವಣಿಗೆಯಿಂದ ಬಿಡುವು ಸಿಕ್ಕಾಗ ತಿರುಗಾಟ, ಪ್ರವಾಸ ಇವರ ಹವ್ಯಾಸ., ...
READ MORE