ಅಮರ ಚಿತ್ರ ಕಥ ಮಾಲಿಕೆ -ಒಟ್ಟು 8 ಕೃತಿಗಳನ್ನು ಸಂಕಲಿಸಿದ ಪುಸ್ತಕವಿದು. ಲೇಖಕರು-ಅನಂತ ಪೈ. ಹಕ್ಕ ಮತ್ತು ಬುಕ್ಕ, ಕಾಳಿದಾಸ, ರಾಣಿ ಅಬಕ್ಕ, ಬಸವೇಶ್ವರ, ಮಧ್ವಾಚಾರ್ಯ, ಷಹಜಹಾನ್, ಬಾಹುಬಲಿ ಹಾಗೂ ಟಿಪ್ಪು ಸುಲ್ತಾನ್-ಈ ಕೃತಿಗಳನ್ನು ಒಳಗೊಂಡಿದೆ.
ಅನಂತ ಪೈ ಅವರ ಪೂರ್ಣ ಹೆಸರು-ಕಾರ್ಕಳ ವೆಂಕಟ್ರಾಯ ಅನಂತ್ ಪೈ. ಕಾರ್ಕಳದಲ್ಲಿ 17-09-1929ರಂದು ಜನನ. ತಂದೆ ವೆಂಕಟ್ರಾಯ, ತಾಯಿ ಸುಶೀಲಾ. ಮಗು ಎರಡು ವರ್ಷವಿದ್ದಾಗ ತಂದೆ-ತಾಯಿ ತೀರಿಕೊಂಡರು. ಸಂಬಂಧಿಕರ ಸಹಕಾರದಲ್ಲಿ ಬೆಳೆದರು. ಮುಂಬೈನ ಮಾಹಿಮ್ ಓರಿಯೆಂಟಲ್ ಶಾಲೆಯಲ್ಲಿ ಶಿಕ್ಷಣ ನಂತರ ಮುಂಬೈ ವಿ.ವಿ.ಯಿಂದ ಕೆಮಿಕಲ್ ಟೆಕ್ನಾಲಜಿಯಲ್ಲಿ ಎರಡು ಪದವಿ ಪಡೆದರು. ಅಂಕಲ್ ಪೈ ಎಂದೇ ವಿಶ್ವಖ್ಯಾತಿ. ವ್ಯಂಗ್ಯ ಚಿತ್ರಗಳು ಅಷ್ಟೇನೂ ಹೆಸರುಮಾಡಿರದ ಕಾಲದಲ್ಲಿ 'ಅನಂತ ಪೈ'ರವರು ಮಕ್ಕಳ ಮನಸ್ಸಿಗೆ ನಾಟುವಂತೆ ಸೃಷ್ಟಿಸಿದ ಕಥಾಚಿತ್ರಗಳು, ಅವರ ಕಥೆಯನ್ನು ಹೇಳುವ ಕೌಶಲ್ಯಕ್ಕೆ ಸಾಕ್ಷಿಯಾಗಿವೆ. ಮಕ್ಕಳ ಸುಸುಪ್ತ ಚೇತನವನ್ನು ಹುರಿಗೊಳಿಸಿ ಅತ್ಯಂತ ...
READ MORE