ಲೇಖಕ ಬೆ.ಗೋ. ರಮೇಶ್ ಅವರು ಅಮೆರಿಕಾಕ್ಕೆ ಕೈಗೊಂಡ ಪ್ರವಾಸ ಕಥನವಿದು-ಅಮೆರಿಕಾ ಎಂಬ ಅದ್ಭುತ ಲೋಕ. ಅಷ್ಟೇನೂ ಹಳೆಯ ಇತಿಹಾಸ ಹೊಂದಿರದ ಅಮೆರಿಕವು ತನ್ನ ತಾಂತ್ರಿಕ ಪ್ರಗತಿಯನ್ನು ಮೈಗೂಡಿಸಿಕೊಂಡು ಶೀಘ್ರವಾಗಿ ಬೆಳೆದು ಅದ್ಭುತ ಲೋಕವನ್ನೇ ಸೃಷ್ಟಿಸಿಕೊಂಡಿದೆ. ವಿಶ್ವದ ಜನರನ್ನು ತನ್ನತ್ತ ಆಕರ್ಷಿಸುತ್ತಿದೆ. ಸ್ಮಾರಕಗಳನ್ನು ಸಂರಕ್ಷಿಸುವ ಮೂಲಕ ಇತಿಹಾಸ ಪ್ರಜ್ಞೆಯನ್ನು ಮೆರೆದು ಮಾದರಿಯಾಗಿದೆ. ಪ್ರವಾಸದ ಹಿನ್ನೆಲೆಯಲ್ಲಿಯೇ ಆ ದೇಶವು ತನ್ನ ಆರ್ಥಿಕ ಮೂಲವನ್ನು ಸದೃಢಗೊಳಿಸಿಕೊಂಡಿದೆ. ಹೀಗೆ ವಿವಿಧ ಅಂಶಗಳ ಹಿನ್ನೆಲೆಯಲ್ಲಿ ಲೇಖಕರು ಕಂಡುಂಡ ಅನುಭವಗಳನ್ನು ಕೃತಿಯಲ್ಲಿ ದಾಖಲಿಸಿದ್ದಾರೆ.
ಬೆ.ಗೋ. ರಮೇಶ್ ಮೈಸೂರು ಜಿಲ್ಲೆಯ ಕೆ.ಆರ್. ನಗರ ತಾಲ್ಲೂಕಿನ ದೊಡ್ಡ ಹನಸಗೆಯಲ್ಲಿ ಆಗಸ್ಟ್ 22 , 1945ರಲ್ಲಿ ಜನಿಸಿದರು. ತಂದೆ ಗೊವಿಂದರಾಜು, ತಾಯಿ ರಾಧಮ್ಮನವರು. ಅವರ ಪ್ರಾರಂಭಿಕ ಶಿಕ್ಷಣ ನಡೆದದ್ದು ಬೆಂಗಳೂರಿನ ಮಲ್ಲೇಶ್ವರಂ ಶಾಲೆಯಲ್ಲಿ. ಇಂಟರ್‌ಮೀಡಿಯೆಟ್ ಓದಿದ್ದು ಸರಕಾರಿ ಕಾಲೇಜಿನಲ್ಲಿ. ಮುಂದೆ ರಮೇಶರು ಹಾಸನದ ಮಲ್ನಾಡ್ ಎಂಜನಿಯರಿಂಗ್ ಕಾಲೇಜಿನಿಂದ ಬಿ.ಇ. ಪದವಿ ಪಡೆದರು. ಹೆಬ್ಬಾಳದ ಕೃಷಿ ವಿಶ್ವವಿದ್ಯಾಲಯದಲ್ಲಿ ಕೆಲಕಾಲ ಉದ್ಯೋಗ ನಿರ್ವಹಿಸಿದ ಬೆ. ಗೋ ರಮೇಶರು ಕರ್ನಾಟಕ ಪವರ್ ಕಾರ್ಪೋರೇಷನ್ನಿನಲ್ಲಿ ಸಹಾಯಕ ಎಂಜನಿಯರಾಗಿ, ಸಹಾಯಕ ಎಕ್ಸುಕ್ಯುಟಿವ್ ಎಂಜನಿಯರಾಗಿ, ಎಕ್ಸಿಕ್ಯುಟಿವ್ ಎಂಜನಿಯರಾಗಿ, ರಾಯಚೂರಿನ ಶಾಕೋತ್ಪನ್ನ ವಿದ್ಯುದಾಗಾರದಲ್ಲಿ ಸೇವೆ ಸಲ್ಲಿಸಿ ...
READ MORE