ಅಮೆರಿಕಾದಲ್ಲಿ ನಾನು _ ಕೃತಿಯನ್ನು ಬಿ.ಜಿ.ಎಲ್. ಸ್ವಾಮಿ ರಚಿಸಿದ ಪ್ರವಾಸ ಕಥನವಾಗಿದೆ. ಕನ್ನಡ ಪ್ರವಾಸ ಸಾಹಿತ್ಯದಲ್ಲಿ ಅತ್ಯುತ್ತಮ ಸಾಹಿತ್ಯ ಎಂದು ಈ ಕೃತಿಯನ್ನು ಪರಿಗಣಿಸಲಾಗುತ್ತಿದೆ. ಅಮೆರಿಕಾದಲ್ಲಿ ಲೇಖಕರು ತಮ್ಮ ಅನುಭವವನ್ನು ವಿಶಿಷ್ಟವಾಗಿ ದಾಖಲಿಸಿದ್ದಾರೆ. ಈ ಅನುಭವಗಳು ಸಹಜವಾಗಿಯಾದರೂ ಅವುಗಳಲ್ಲಿಯ ಸೂಕ್ಷ್ಮತೆ, ಹಾಗೂ ಕಲಾತ್ಮಕತೆ ಕೇವಲ ಬಿಜಿಎಲ್ ಸ್ವಾಮಿ ಅವರಂತಹ ಬರೆಹಗಾರರಿಗೆ ಮಾತ್ರ ಸಾಧ್ಯ ಎನ್ನುವಂತೆ ಬರೆಹ ಶೈಲಿ ಇದೆ.
ಬಿ. ಜಿ. ಎಲ್. ಸ್ವಾಮಿ ಅಂತರ್‌ರಾಷ್ಟ್ರೀಯ ಮಟ್ಟದ ಸಸ್ಯವಿಜ್ಞಾನಿ, ಹಿರಿಯ ವಿದ್ವಾಂಸ, ಸಾಹಿತಿ, ಚಿಂತನಶೀಲ ಬರಹಗಾರ ಡಾ. ಬಿ.ಜಿ.ಎಲ್. ಸ್ವಾಮಿ. `ಶ್ರೇಷ್ಠ ವಿಜ್ಞಾನಿ' ಎಂದು ಹೆಸರಾಗಿದ್ದ ಖ್ಯಾತ ಸಂಶೋಧಕ ಸ್ವಾಮಿ ಅವರ ಪೂರ್ಣ ಹೆಸರು ’ಬೆಂಗಳೂರು ಗುಂಡಪ್ಪ ಲಕ್ಷ್ಮೀನಾರಾಯಣಸ್ವಾಮಿ’. ಕನ್ನಡದ ಹಿರಿಯ ಸಾಹಿತಿ ಡಿವಿಜಿಯವರ ಪುತ್ರ. 1916ರ ಫೆಬ್ರುವರಿ ಐದರಂದು ಜನಿಸಿದ ಅವರು ಬಾಲ್ಯದಲ್ಲಿಯೇ ತಾಯಿಯನ್ನು ಕಳೆದುಕೊಂಡರು. ತಂದೆಯ ಗುಂಡಪ್ಪ ಹಾಗೂ ಅವರ ಗ್ರಂಥ ಭಂಡಾರದಿಂದ ಪ್ರತಿಭಾನ್ವಿತರಾದ ವ್ಯಕ್ತಿ. ಪ್ರಾಥಮಿಕದಿಂದ ಪದವಿಯವರೆಗೆ ಬೆಂಗಳೂರಿನಲ್ಲಿ ವ್ಯಾಸಂಗ ಮಾಡಿದ ಅವರು ಸೆಂಟ್ರಲ್ ಕಾಲೇಜಿನಲ್ಲಿ ಸಸ್ಯಶಾಸ್ತ್ರದ ವಿದ್ಯಾರ್ಥಿ ಆಗಿರುವಾಗ ಕರ್ನಾಟಕ ಸಂಘದ ಕಾರೈದರ್ಶಿ ...
READ MORE