ಹೊಸಹೊಸ ಅಧ್ಯಯನಗಳ ಆರೋಗ್ಯಪೂರ್ಣ ಗದ್ದಲದಲ್ಲಿ ಡಾ. ಚನ್ನಪ್ಪ ಕಟ್ಟಿಯವರು ಸದ್ದುಗದ್ದಲವಿಲ್ಲದೆ ‘ಅಮೋಘಸಿದ್ಧ’ ಸಂಪ್ರದಾಯವನ್ನು ಪಿಎಚ್.ಡಿ ವಿಷಯವಾಗಿ ಆಯ್ಕೆ ಮಾಡಿಕೊಂಡು ಯಶಸ್ವಿಯಾಗಿದ್ದಾರೆ. ವಚನ ಪಿತಾಮಹ ಡಾ.ಫ.ಗು.ಹಳಕಟ್ಟಿ ಸಂಶೋಧನ ಕೇಂದ್ರದ ಮೂಲಕ ಸಂಶೋಧನೆಯಲ್ಲಿ ತೊಡಗಿ ಹಂಪಿಯ ಕನ್ನಡ ವಿಶ್ವವಿದ್ಯಾಲಯದಿಂದ ಪಿಎಚ್.ಡಿ ಪದವಿ ಪಡೆದಿದ್ದಾರೆ. ಅವರ ಸಂಶೋಧನಾ ಪ್ರಬಂಧವೇ ಅಮೋಘಸಿದ್ಧ ಪರಂಪರೆ ಕೃತಿ.
ಡಾ. ಚನ್ನಪ್ಪ ಕಟ್ಟಿಯವರ ಪೂರ್ಣ ಹೆಸರು ಚನ್ನಪ್ಪ ಕನಕಪ್ಪ ಕಟ್ಟಿ. ಮೂಲತಃ ಗದಗ ಜಿಲ್ಲೆ, ರೋಣ ತಾಲ್ಲೂಕು ಹಿರೇಹಾಳ ಗ್ರಾಮದವರು. ಪ್ರಾಥಮಿಕ ಶಿಕ್ಷಣವನ್ನು ಹಿರೇಹಾಳ ಗ್ರಾಮದಲ್ಲಿ ಮುಗಿಸಿದ ಅವರು ಮಾಧ್ಯಮಿಕ ಶಿಕ್ಷಣವನ್ನು ಶ್ರೀ ವೀರಪುಲಿಕೇಶಿ ಮಾಧ್ಯಮಿಕ ಶಾಲೆಯಲ್ಲಿ ಪೂರ್ಣಗೊಳಿಸಿದ್ದಾರೆ. ಆನಂತರ ಶ್ರೀವೀರಪುಲಿಕೇಶಿ ಪದವಿ ಪೂರ್ವ ಮಹಾವಿದ್ಯಾಲಯ, ಬಾದಾಮಿಯಲ್ಲಿ ಪದವಿ ಪೂರ್ಣ ಶಿಕ್ಷಣ ಪಡೆದ ಅವರು, ಕರ್ನಾಟಕ ಕಲಾ ಮಹಾವಿದ್ಯಾಲಯ, ಧಾರವಾಡದಲ್ಲಿ ಇಂಗ್ಲಿಷ್ ನಲ್ಲಿ ಪದವಿ ಪಡೆದಿದ್ದಾರೆ. ಜೊತೆಗೆ ಕರ್ನಾಟಕ ವಿಶ್ವವಿದ್ಯಾಲಯ, ಧಾರವಾಡದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಆನಂತರ ಸಿಂದಗಿಯ ಜಿ.ಪಿ.ಪೋರವಾಲ ಕಲಾ, ವಾಣಿಜ್ಯ ಹಾಗೂ ವಿ.ವಿ.ಸಾಲಿಮಠ ವಿಜ್ಞಾನ ...
READ MORE