`ಅಮೂಲ್ಯ ರೆಡ್ಡಿ’ ಕೃತಿಯನ್ನು ಹಿರಿಯ ಸಾಹಿತಿ ಪ್ರೊ. ಎಲ್. ಎಸ್. ಶೇಷಗಿರಿ ರಾವ್ ಅವರು `ಸಪ್ನ ದಿವ್ಯದರ್ಶನ’ ಮಾಲೆಯಡಿ ಸಂಪಾದಿಸಿದ್ದಾರೆ. ಅಮೂಲ್ಯ ರೆಡ್ಡಿ ಭಾರತ ಕಂಡ ಉನ್ನತಮಟ್ಟದ ರಸಾಯನ ವಿಜ್ಞಾನಿ. ಕೈಗಾರಿಕೆಗಳಲ್ಲಿ ಇವರು ಮಾಡಿದ ಸಂಶೋಧನೆಗೆ ಅತ್ಯುತ್ತಮ ಪ್ರತಿಕ್ರಿಯೆ ಬಂದಿತ್ತು. ಶಕ್ತಿಯ ಹೊಸ ಸಂಪನ್ಮೂಲದ ಬಗ್ಗೆ ಆಳವಾದ ಅಧ್ಯಯನ ಮಾಡಿ ನಮ್ಮ ದೇಶದ ಪರಿಸ್ಥಿತಿಗೆ ಹೊಂದಿಕೊಳ್ಳುವ ಬಗ್ಗೆ ವಿಶೇಷ ಕಾಳಜಿ ವಹಿಸಿದ್ದರು.
ಅವರ ಜೀವಿತಾವಧಿಯಲ್ಲಿ ಸುಮಾರು 300 ಸಂಶೋಧನ ಲೇಖನಗಳನ್ನು ಬರೆದರು. ಸೆಂಟ್ರಲ್ ಕಾಲೇಜಿನಲ್ಲಿ ರಸಾಯನ ವಿಜ್ಞಾನದ ಅಧ್ಯಾಪಕರಾಗಿ, ಮುಂದೆ ಲಂಡನ್ ನ ಇಂಪೀರಿಯಲ್ ಕಾಲೇಜಿನಲ್ಲಿ ಪಿಎಚ್.ಡಿ. ಪಡೆದು, ಭಾರತಕ್ಕೆ ಹಿಂತಿರುಗಿ ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ ಯುಕ್ತ ತಂತ್ರಜ್ಞಾನಗಳ ಬಗ್ಗೆ ಕೆಲಸ ಮಾಡಿದರು. ಗೋಬರ್ ಗ್ಯಾಸ್ ಕುರಿತು ಪ್ರಯೋಗ ಮಾಡಿ ತುಮಕೂರು ಜಿಲ್ಲೆಯ ಹಳ್ಳಿಗಳಿಗೆ ಎರಡು ಸ್ಥಾವರಗಳನ್ನು ಕಟ್ಟಿಕೊಟ್ಟರು. `ಸುಸ್ಥಿರ ಜಗತ್ತಿಗೆ ಶಕ್ತಿ’ ಎಂಬ ಅವರ ಕೃತಿ ಅಂತಾರಾಷ್ಟ್ರೀಯ ಖ್ಯಾತಿ ತಂದುಕೊಟ್ಟಿತು. ರೆಡ್ಡಿ ಅವರು ಪರಮಾಣು ಶಕ್ತಿ ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಅಮೂಲ್ಯ ರೆಡ್ಡಿ ಅವರ ಬಾಲ್ಯ, ವಿದ್ಯಾಭ್ಯಾಸ, ವಿಜ್ಞಾನಕ್ಕೆ ಕೊಟ್ಟ ಕೊಡುಗೆಗಳು ಇವೇ ಮುಂತಾದವನ್ನು ಅತ್ಯಂತ ಸರಳವಾಗಿ ಲೇಖಕರು ಈ ಕೃತಿಯಲ್ಲಿ ವಿವರಿಸಿದ್ದಾರೆ.
ಭೂ ವಿಜ್ಞಾನಿ, ಸಂಶೋಧಕ, ಅಂಕಣಕಾರ, ವಿಜ್ಞಾನ ಲೇಖಕ ಟಿ.ಆರ್. ಅನಂತರಾಮು ಅವರು ಜನಿಸಿದ್ದು 1949 ಆಗಸ್ಟ್ 3ರಂದು ತುಮಕೂರು ಜಿಲ್ಲೆ ಶಿರಾ ತಾಲ್ಲೂಕಿನ ತಾಳಗುಂದದಲ್ಲಿ.ತಾಳಗುಂದ ರಾಮಣ್ಣ ಅನಂತರಾಮು ಅವರ ಪೂರ್ಣ ಹೆಸರು. ಸಿರಾದ ಸರ್ಕಾರಿ ಮಾಧ್ಯಮಿಕ ಶಾಲೆಯಲ್ಲಿ ಮಾಧ್ಯಮಿಕ ಶಿಕ್ಷಣ ಪೂರ್ಣಗೊಳಿಸಿದ ಅವರು ಸಿರಾದ ಮುನಿಸಿಪಲ್ ಹೈಸ್ಕೂಲಿನಲ್ಲಿ ಪ್ರೌಢಶಿಕ್ಷಣ ಪೂರ್ಣಗೊಳಿಸಿದ್ದಾರೆ. ಆನಂತರ ತುಮಕೂರಿನ ಸರ್ಕಾರಿ ಕಾಲೇಜಿನಲ್ಲಿ ಪದವಿ, ಮೈಸೂರು ವಿಶ್ವವಿದ್ಯಾಲಯದಲ್ಲಿ ಎಂ.ಎನ್ಸಿ(ಜಿಯಾಲಜಿ) ಪದವಿ ಪಡೆದಿದ್ದಾರೆ. ಭೂ ವಿಜ್ಞಾನ ವಿಷಯದಲ್ಲಿ ಪದವಿ ಪಡೆದ ನಂತನ ಬೆಂಗಳೂರಿನ ಸರ್ಕಾರಿ ವಿಜ್ಞಾನ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿ, ರಾಜ್ಯದ ನಾನಾ ಕಾಲೇಜುಗಳಲ್ಲಿ ಅಧ್ಯಾಪಕರಾಗಿ ಕೆಲಸ ಮಾಡಿದ್ದಾರೆ. ...
READ MORE