ಈ ಪುಸ್ತಕದಲ್ಲಿ ಹೆಚ್. ಡುಂಡಿರಾಜ್‍ರವರು ತಮ್ಮ ಅಮೇರಿಕಾ ಪ್ರವಾಸದ ಸುಂದರ ಕ್ಷಣಗಳನ್ನು ದಾಖಲಿಸಿದ್ದಾರೆ. ಪ್ರವಾಸದ ಸಮಯದಲ್ಲಿ ನೋಡಿದ ಅಥವಾ ದಾಖಲಾದ ಸಾಮಾನ್ಯ ಸಂಗತಿಗಳ ಕುರಿತು ವ್ಯಂಗ್ಯ ಮಿಶ್ರಿತ ಹಾಸ್ಯದ ಮೂಲಕ ವಿವರಣೆ ನೀಡುವ ಪುಸ್ತಕವಿದು. ಇಂತಹ ಹಲವು ಘಟನೆಗಳು ಈ ಪುಸ್ತಕದ ಪ್ರಮುಖ ಆಕರ್ಷಣೆ. ಇಲ್ಲಿನ ಮತ್ತು ಅಲ್ಲಿನ ವ್ಯವಸ್ಥೆ, ಜನರು ಹೀಗೆ ಹಲವು ತುಲನಾತ್ಮಕ ವಿಷಯಗಳನ್ನು ಹಾಸ್ಯದ ಧಾಟಿಯಲ್ಲಿ ಉಣಬಡಿಸುವ ಕೃತಿ ಅನಿವಾಸಿಗಳೇ ವಾಸಿ. ಪಯಣದುದ್ದಕ್ಕೂ ಜೊತೆಯಲ್ಲಿದ್ದವರೊಂದಿಗೆ ಹರಟುತ್ತಾ, ಹಳೇಯ ರೆಡಿಮೇಡ್ ಜೋಕ್‍ಗಳನ್ನು ಉಪಯೋಗಿಸದೇ ಹೊಸ ಹೊಸ ಹನಿಕವನಗಳನ್ನು ಸೃಷ್ಟಿಸುತ್ತಾ ಸಾಗಿದ ಪಯಣದ ಕಥೆಗಳನ್ನು ಈ ಪುಸ್ತಕದಲ್ಲಿ ದಾಖಲಿಸಲಾಗಿದೆ.
ಎಚ್. ಡುಂಡಿರಾಜ್, ಕನ್ನಡದ ಹೆಸರಾಂತ ಚುಟುಕು ಕಾವ್ಯ ಸಾಹಿತಿ. ಈವರೆಗೆ ಸುಮಾರು 45 ಪುಸ್ತಕಗಳನ್ನು ಬರೆದಿರುವ ಇವರು, ತಮ್ಮ ಪುಸ್ತಕಗಳಲ್ಲಿ ಚುಟುಕು ಸಾಹಿತ್ಯದ ಕುರಿತಾಗಿನ ಎಳೆಗಳನ್ನು ಸೂಕ್ಷ್ಮವಾಗಿ ಬಿಡಿಸಿಟ್ಟಿದ್ದಾರೆ. ಸಾಹಿತ್ಯ ಮತ್ತು ಹಾಸ್ಯದ ಸಮ್ಮಿಲನ ಇವರ ಕೃತಿಗಳ ವಿಶೇಷತೆ. ಉಡುಪಿ ಜೆಲ್ಲೆಯ ಹಟ್ಟಿಕುದ್ರುವಿನಲ್ಲಿ 18 ಆಗಸ್ಟ್ 1956ರಲ್ಲಿ ಜನಿಸಿದ ಇವರು, ಬೆಂಗಳೂರಿನ ಕೃಷಿ ವಿಶ್ವವಿದ್ಯಾಲಯದಲ್ಲಿ ಎಂ.ಎಸ್ಸಿ. ಪದವಿಯನ್ನು ಪಡೆದಿದ್ದಾರೆ. ಸದ್ಯಕ್ಕೆ ಮಂಗಳೂರಿನ ಕಾರ್ಪೋರೇಶನ್ ಬ್ಯಾಂಕ್‍ನ ಸಹಾಯಕ ಮಹಾ ವ್ಯವಸ್ಥಾಪಕರಾಗಿ ಕಾರ್ಯ ನಿರ್ವಹಿಸುತ್ತಾ ಇದ್ದಾರೆ. 2011ರಲ್ಲಿ ನಡೆದ ಸಂಯುಕ್ತ ಅರಬ್ ಸಂಸ್ಥಾನದ ಚುಟುಕು ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದ ಇವರು, ...
READ MORE