ಡಾ.ವಿಜಯಶ್ರೀ ಸಬರದ ಅವರ ಮಹಾಪ್ರಬಂಧ ‘ಅನುಪಮಾ ನಿರಂಜನ ಅವರ ಕಾದಂಬರಿಗಳು’ ಒಂದು ಸಾಹಿತ್ಯಿಕ ಅಧ್ಯಯನ. ಈ ಪ್ರಬಂಧಕ್ಕಾಗಿ 1991 ರಲ್ಲಿ ಗುಲ್ಬರ್ಗ ವಿಶ್ವವಿದ್ಯಾಲಯದಿಂದ ಪಿಎಚ್.ಡಿ ಪದವಿ ಪಡೆದಿದ್ದಾರೆ. 1994ರಲ್ಲಿ ಪ್ರಥಮ ಮುದ್ರಣ ಕಂಡ ಈ ಕೃತಿ 2018ರಲ್ಲಿ ಮರು ಮುದ್ರಣಗೊಂಡಿದೆ. ಈ ಕೃತಿಯಲ್ಲಿ ಪ್ರಾಸ್ತಾವಿಕ, ಪರಿಸರ- ಪ್ರೇರಣೆ, ಸಾಮಾಜಿಕ ಪ್ರಜ್ಞೆ, ಮಾನವೀಯ ಸಂಬಂಧಗಳು, ಬಂಡಾಯ ಮನೋಭಾವ, ದಲಿತರ ಚಿತ್ರಣ, ಮನೋವೈಜ್ಞಾನಿಕ ವಿಶ್ಲೇಷಣೆ, ಪೌರಾಣಿಕ ಕಾದಂಬರಿ ಮಾಧವಿ, ಪಾತ್ರ ಚಿತ್ರಣ, ಭಾಷೆ- ಶೈಲಿ- ತಂತ್ರ, ಸಾಹಿತ್ಯಕ ಕೊಡುಗೆ- ಅನುಬಂಧ-1: ಅನುಪಮಾ ನಿರಂಜನ ಕೃತಿಸೂಚಿ, ಅನುಬಂಧ 2: ಗ್ರಂಥಋಣ ಸಂಕಲನಗೊಂಡಿವೆ.
ಮಹಿಳೆಯರ ಶೋಷಣೆ ಮತ್ತು ಸ್ತ್ರೀಯರು ಎದುರಿಸುತ್ತಿರುವ ಸವಾಲುಗಳ ಬಗ್ಗೆ ತಮ್ಮ ಖಚಿತ ಅಭಿಪ್ರಾಯ ಮಂಡಿಸುವ ಲೇಖಕಿ ವಿಜಯಶ್ರೀ ಸಬರದ. ಅವರು ಜನಿಸಿದ್ದು 1957ರ ಫೆಬ್ರುವಿರ 1ರಂದು. ತಂದೆ ಗುಣವಂತರಾವ ಪಾಟೀಲ. ತಾಯಿ ಸಂಗಮ್ಮ. ಪ್ರಾರಂಭಿಕ ಶಿಕ್ಷಣ ಹಾಗೂ ಕಾಲೇಜು ಪದವಿ ಶಿಕ್ಷಣವನ್ನು ಬೀದರ್‌ನಲ್ಲಿ ಪಡೆದ ಅವರು ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಿಂದ ಎಂ.ಎ. ಪದವಿ ಪಡೆದರು. ’ಅನುಪಮಾ ನಿರಂಜನರ ಕಾದಂಬರಿಗಳು; ಒಂದು ಅಧ್ಯಯನ” ಎಂಬ ಪ್ರಬಂಧ ಮಂಡಿಸಿ ಗುಲಬರ್ಗಾ ವಿಶ್ವವಿದ್ಯಾಲಯದಿಂದ ಪಡೆದ ಪಿಎಚ್.ಡಿ. ಪದವಿ ಪಡೆದರು. ಬೀದರ್‌ನ ಅಕ್ಕ ಮಹಾದೇವಿ ಮಹಿಳಾ ವಿದ್ಯಾಲಯದಲ್ಲಿ ಉಪನ್ಯಾಸಕಿಯಾಗಿ ವೃತ್ತಿ ಜೀವನ ಆರಂಭಿಸಿದ ಅವರು ನಂತರ ...
READ MORE