’ಅಪ್ಪನ ಪ್ರತಿರೂಪ ಮತ್ತು ಇತರ ಕತೆಗಳು’ ಕಥಾಸಂಕಲನವು ಹಲವು ದೃಷ್ಟಿಯಲ್ಲಿ ಮಹತ್ವದ ಕೃತಿಯಾಗಿದೆ. ಇದರಲ್ಲಿ ಒಟ್ಟು ಹದಿನಾರು ಕತೆಗಳಿದ್ದು, ಅವೆಲ್ಲವೂ ಜಗತ್ತಿನ ಬೇರೆ ಬೇರೆ ದೇಶದ ಕತೆಗಳಾಗಿವೆ. ಜಾಗತಿಕ ಹಿನ್ನೆಲೆಯಲ್ಲಿ ಬಹುಸಂಸ್ಕೃತಿಯ ಬದುಕನ್ನು ಮನಃಶಾಸ್ತ್ರೀಯ ದೃಷ್ಟಿಯಿಂದ ಅರಿತುಕೊಳ್ಳಲು ಇಂತಹ ಕತೆಗಳು ಉಪಯುಕ್ತ. ಇದರಲ್ಲಿರುವ ಎಲ್ಲಾ ಕತೆಗಳು ಕೆಲವೊಂದು ಸಾಮಾಜಿಕ ಸಮಸ್ಯೆಗಳ ಕಡೆ ಬೆಳಕು ಚೆಲ್ಲುವ ನಿಟ್ಟಿನಲ್ಲಿ ಓದುಗರನ್ನು ಚಿಂತನೆಗೆ ಒಳಗು ಮಾಡುತ್ತವೆ. ಇಂತಹ ಅಪೂರ್ವ ಕತೆಗಳನ್ನು ಸಂಗ್ರಹಿಸಿರುವ ಟಿ. ಡಿ. ರಾಜಣ್ಣ ತಗ್ಗಿಯವರು ಅವುಗಳನ್ನು ಕನ್ನಡಕ್ಕೆ ತಂದಿದ್ದಾರೆ.
ಕನ್ನಡದ ಯುವ ಸಂಶೋಧಕ, ಅನುವಾದಕ ಟಿ.ಡಿ. ರಾಜಣ್ಣ ತಗ್ಗಿ ಅವರು ಮೂಲತಃ ತುಮಕೂರು ಜಿಲ್ಲೆ, ಮಧುಗಿರಿ ತಾಲೂಕಿನ ತಗ್ಗಿಹಳ್ಳಿಯವರು. ಬೆಂಗಳೂರು ವಿಶ್ವವಿದ್ಯಾಲಯದಿಂದ ಕನ್ನಡ ಎಂ.ಎ, ಎಂ.ಫಿಲ್ ಮತ್ತು ಪಿಎಚ್.ಡಿ ಪದವಿಗಳನ್ನು ಪಡೆದಿರುವ ಅವರು ಮದರಾಸು ವಿಶ್ವವಿದ್ಯಾಲಯ ಹಾಗೂ ಜೈನ್ ವಿಶ್ವವಿದ್ಯಾಲಯಗಳಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ. ಹಲವಾರು ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ವಿಚಾರ ಸಂಕಿರಣಗಳಲ್ಲಿ ಮೌಲಿಕ ಪ್ರಬಂಧಗಳನ್ನು ಮಂಡಿಸಿರುವ ರಾಜಣ್ಣ ತಗ್ಗಿ ಅವರು ಮದರಾಸು , ಬೆಂಗಳೂರು ಮತ್ತು ಗುಲಬರ್ಗಾ ಆಕಾಶವಾಣಿ ಕೇಂದ್ರಗಳಲ್ಲಿಯೂ ಹಲವು ಸಾಹಿತ್ಯಿಕ ಕಾರ್ಯಕ್ರಮಗಳನ್ನು ನೀಡಿದ್ದಾರೆ. ಕನ್ನಡ, ತೆಲುಗು, ತಮಿಳು, ಇಂಗ್ಲಿಷ್, ಭಾಷೆ ಬಲ್ಲವರಾಗಿದ್ದು, ...
READ MORE