ಕುಂ. ವೀರಭದ್ರಪ್ಪನವರ ಕಾದಂಬರಿ-ಅರಮನೆ. ಬಳ್ಳಾರಿ ಜಿಲ್ಲೆಯ ಪರಿಸರವನ್ನು ಕಾವ್ಯದ ಗೇಯತೆಯಲ್ಲಿ ಮೂಡಿದ ಕಾದಂಬರಿ ಇದು. ಐತಿಹಾಸಿಕ, ಪೌರಾಣಿಕ ಹಾಗೂ ಜಾನಪದೀಯ ಅಂಶಗಳಿದ್ದರೂ ವಾಸ್ತವವನ್ನು ದಾಟಿಲ್ಲದೇ ಇರುವುದು ಈ ಕಾದಂಬರಿಯ ವೈಶಿಷ್ಟ್ಯ. ಅರಮನೆ ಕೃತಿಗೆ 2007ರ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಸಂದಿದೆ.
ಕುಂ.ವೀ. ಎಂದೇ ಜನಪ್ರಿಯರಾಗಿರುವ ಕಾದಂಬರಿಕಾರ, ಕತೆಗಾರ ಕುಂ. ವೀರಭದ್ರಪ್ಪ ಅವರು ಬಳ್ಳಾರಿ ಜಿಲ್ಲೆ ಕೂಡ್ಲಿಗಿ ತಾಲೂಕಿನ ಕೊಟ್ಟೂರಿನವರು. 1953ರ ಅಕ್ಟೋಬರ್ 1ರಂದು ಜನಿಸಿದರು. ‘ಬೇಲಿ ಮತ್ತು ಹೊಲ’ ಕಿರುಕಾದಂಬರಿಯ ಮೂಲಕ ಕನ್ನಡ ಸಾಹಿತ್ಯದ ಶಿಷ್ಟ ಪರಂಪರೆಯ ಬೇಲಿಗಳನ್ನು ಜಿಗಿದ ಕುಂ. ವೀರಭದ್ರಪ್ಪ, ಓದುಗರನ್ನು ಆಕರ್ಷಿಸಿದ್ದು ತಮ್ಮ ವಿಶಿಷ್ಟ ಭಾಷಾ ಪ್ರಯೋಗ ಮತ್ತು ನುಡಿಗಟ್ಟುಗಳಿಂದ. ಅವರ ಕತೆಗಳಲ್ಲಿ ಕಾದಂಬರಿಗಳಲ್ಲಿ ಕಾಣಿಸಿಕೊಂಡ ಭಾಷೆ ಅವರಿಗೆ ಸಾಹಿತ್ಯದಲ್ಲೊಂದು ಪ್ರತ್ಯೇಕ ಸ್ಥಾನ ಕಲ್ಪಿಸಿಕೊಟ್ಟಿತು. ’ಎಲುಗನೆಂಬ ಕೊರಚನೂ ಚವುಡನೆಂಬ ಹಂದಿಯೂ’, ’ಕತ್ತಲಿಗೆ ತ್ರಿಶೂಲ ಹಿಡಿದ ಕತೆ’ಗಳ ಮೂಲಕ ಸಣ್ಣ ಕತೆಯ ದಿಕ್ಕನ್ನು ಬದಲಾಯಿಸಿದರು. ಶಿವರಾಜ್ ...
READ MORE