ಅರ್ಧರಾತ್ರಿಯ ಸಂಭಾಷಣೆ-ಖ್ಯಾತ ಲೇಖಕ ಗಿರಿಮನೆ ಶ್ಯಾಮರಾವ್ ಅವರ ಕಥಾ ಸಂಕಲನ. ವಸ್ತು, ನಿರೂಪಣಾ ಶೈಲಿ, ಪಾತ್ರಗಳ ಸೃಷ್ಟಿ, ಸನ್ನಿವೇಶಗಳ ಜೋಡಣೆ, ಪರಿಣಾಂಕಾರಿ ಸಂಭಾಷಣೆ ಇತ್ಯಾದಿ ಸಾಹಿತ್ಯಕ ಅಂಶಗಳು ಓದುಗರ ಗಮನ ಸೆಳೆಯುತ್ತವೆ. ಮಲೆನಾಡಿನ ರೋಚಕ ಕಥೆಗಳನ್ನು ಬರೆದಿರುವ ಲೇಖಕರು, ಕಥೆಗಳ ರಚನಾ ಕೌಶಲವು ಇಲ್ಲಿಯ ಕಥೆಗಳ ಆಕರ್ಷಣೆ ಹಾಗೂ ಪರಿಣಾಮಕಾರಿ ಅಂಶವಾಗಿದೆ.
ಗಿರಿಮನೆ ಶ್ಯಾಮರಾವ್ ಆಧುನಿಕ ಕನ್ನಡ ಸಾಹಿತ್ಯ ಲೋಕದಲ್ಲಿ ತಮ್ಮದೇ ಆದ ವಿನೂತನ ರೀತಿಯ ಬರವಣೆಗೆಗಳಿಂದ ಕನ್ನಡ ಓದುಗ ಆಸಕ್ತರ ನಡುವೆ ಚಿರಪರಿಚಿತರು. ಇವರ ಹುಟ್ಟೂರು ಹಾಸನ ಜಿಲ್ಲೆಯ ಸಕಲೇಶಪುರದ ಗಾಣದಹೊಳೆ ಗ್ರಾಮ. ಪತ್ನಿ ಶಶಿಕಲಾ ಹಾಗು ಪುತ್ರ ಚೇತನ್ ಶರ್ಮ. ಕೃಷಿಕನಾಗಿ 35 ವಸಂತಗಳ ಸುದೀರ್ಘ ಅನುಭವವಿದೆ. ಪಶ್ಚಿಮ ಘಟ್ಟದ ಪ್ರಕೃತಿ, ಜೀವಜಗತ್ತಿನ ಪರಿಚಯ, ಮನುಷ್ಯರ ಮನಸ್ಸಿನ ಅವಲೋಕನ, ವೈಜ್ಞಾನಿಕವಾದ ವೇದದ ಒಳಗನ್ನು ತಿಳಿಯುವ ಕುತೂಹಲ ಇವೆಲ್ಲವೂ ಇವರನ್ನು ಬರವಣಿಗೆಯ ಕ್ಷೇತ್ರದೆಡೆಗೆ ಸೆಳೆದಿದೆ. ಹವ್ಯಾಸಿ ಪತ್ರಿಕಾ ಅಂಕಣಕಾರರಾಗಿದ್ದಾರೆ. ಮಕ್ಕಳ ಸಾಹಿತ್ಯ, ವ್ಯಕ್ತಿತ್ವ ವಿಕಸನ, ಚಿಂತನೆ, ಕಾದಂಬರಿ ಹೀಗೆ ಹಲವಾರು ...
READ MORE