`ಆರೋಗ್ಯ ಸಂಹಿತೆ’ ಡಾ.ನಾ ಸೋಮೇಶ್ವರ ಅವರ ಆರೋಗ್ಯ ಕುರಿತ ಕೈಪಿಡಿಯಾಗಿದೆ. ಈ ಕೃತಿಯು, ಆರೋಗ್ಯವನ್ನು ಕಾಪಾಡಿಕೊಳ್ಳುವುದು ಹೇಗೆ ಎನ್ನುವುದರ ಕುರಿತು ಮಾತನಾಡುತ್ತದೆ. ಆರೋಗ್ಯ ಎಂದರೇನು? ಆರೋಗ್ಯವಂತರೆಂದು ಹೇಳಿಕೊಳ್ಳಲು ಕಾರಣವಾದ ಲಕ್ಷಣಗಳೇನು, ಮನಸ್ಸಿಗೂ ದೇಹಕ್ಕೂ ಇರುವ ಸಂಬಂಧ ಎಂಥದ್ದು , ನಾವು ಸೇವಿಸುವ ಆಹಾರ ಆರೋಗ್ಯಕ್ಕೆ ಹೇಗೆ ಜೋಡಿಸಿಕೊಂಡಿದೆ. ಆರೋಗ್ಯ ವರ್ಧನೆಗೆ ಕುಟುಂಬ-ಸಮಾಜದ ಕೊಡುಗೆ ಏನು, ಭಾರತೀಯ ದೃಷ್ಟಿಯಲ್ಲಿ ಆರೋಗ್ಯದ ಪರಿಕಲ್ಪನೆ ಏನು – ಇತ್ಯಾದಿ ಅನೇಕ ವಿಶಿಷ್ಟ ಮಾಹಿತಿಗಳನ್ನು ತುಂಬಿಕೊಂಡಿರುವ ಒಂದು ಅಪರೂಪದ ಕೃತಿ ಇದಾಗಿದೆ.
ನಾ. ಸೋಮೇಶ್ವರ ಮೇ 14 1955 ರಲ್ಲಿ ಬೆಂಗಳೂರಿನಲ್ಲಿ ಜನಿಸಿದರು. ತಂದೆ ನಾರಪ್ಪ ಹಾಗೂ ತಾಯಿ ಅಂಜನಾ. ವಿದ್ಯಾರ್ಥಿಯಾಗಿದ್ದಾಗಲೇ 'ಜೀವನಂದಿ' ಎಂಬ ಮಾಸಿಕ ಪತ್ರಿಕೆಯನ್ನು ಪ್ರಕಟಿಸಿದ್ದರು. ತಮ್ಮ ಬಿ.ಎಸ್.ಸಿ ಪದವಿಯ ಬಳಿಕ, ಎಮ್.ಬಿ.ಬಿ.ಎಸ್ ಪದವಿಯನ್ನು ಗಳಿಸಿದರು. ವೃತ್ತಿಯಿಂದ ವೈದ್ಯರಾದ ಸೋಮೇಶ್ವರರು ಒಂದು ಫಾರ್ಮಸ್ಯೂಟಿಕಲ್ ಕಂಪೆನಿಗೆಸಲಹೆಗಾರರಾಗಿ ಕಾರ್ಯನಿರ್ವಹಿಸಿದರು. ಡಾ. ಸೋಮೆಶ್ವರ ಚಂದನ ಟೆಲಿವಿಷನ್ ವಾಹಿನಿಯಲ್ಲಿ ’ಥಟ್ ಅಂತ ಹೇಳಿ’ ಎನ್ನುವ ಕನ್ನಡ ಕ್ವಿಜ್ ಕಾರ್ಯಕ್ರಮದ ರೂವಾರಿಯಾಗಿ ಪ್ರಸಿದ್ಧರಾದವರು. ವೃತ್ತಿಯಿಂದ ವೈದ್ಯರಾಗಿ ಪ್ರವೃತ್ತಿಯಿಂದ ಲೇಖಕರಾಗಿ ಅನೇಕ ಪುಸ್ತಕಗಳನ್ನು ರಚಿಸಿದ್ದಾರೆ. ಅನಂತದೆಡೆಗೆ, ಓ ನನ್ನ ಚೇತನ, ದೈಹಿಕ ಸ್ವಚ್ಛತೆ, ತಲ್ಲಣಿಸದಿರು ಕಂಡ್ಯ ತಾಳು ಮನವೆ, ಅದೃಶ್ಯ ಲೋಕದ ಅಗೋಚರ ಜೀವಿಗಳು, ನಮ್ಮ ದಿನನಿತ್ಯದ ಆಹಾರ, ಹೀಗೆ ಮೂವತ್ತಕ್ಕೂ ಹೆಚ್ಚು ಕೃತಿಗಳನ್ನು ರಚಿಸಿದ್ದಾರೆ. 2003 ರಲ್ಲಿ ವೈದ್ಯ ಸಾಹಿತ್ಯ ಪ್ರಶಸ್ತಿ, ಡಾಕ್ಟರ್ಸ್ ಡೇ ಪ್ರಶಸ್ತಿ, ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ...
READ MORE