‘ಅವಳು ಭೂಮಿಕಾ' ಒಂದು ಸಾಮಾಜಿಕ ಕಾದಂಬರಿ. ಪ್ರೀತಿ ಎಂದರೆ ಕೇವಲ ಹೂದುಂಬಿಯ ಆಟವಲ್ಲ. ಭೂಮಿ ತೂಕದ ಬದುಕಿನ ಅರ್ಥವನ್ನು ಒಳ ಗೊಂಡಿದೆ ಎನ್ನುವುದನ್ನು ಈ ಕೃತಿ ಸಾದರಪಡಿಸುತ್ತದೆ. ವಸ್ತುಸ್ಥಿತಿಯಲ್ಲಿ ಇದೊಂದು ತ್ರಿಕೋನ ಪ್ರೇಮಕತೆ. ಇಲ್ಲಿ ಕಥಾನಾಯಕಿ ಭೂಮಿ. ಪ್ರತಿ ಹೆಜ್ಜೆಯಲ್ಲೂ ಅಚ್ಚರಿಯನ್ನೇ ಸೃಷ್ಟಿಸುವ ಕತಾ ನಾಯಕಿ ಓದುಗರನ್ನು ವಿಸ್ಮಯಕ್ಕೆ ತಳ್ಳುತ್ತಾಳೆ.
ಕವಿ, ಕಾದಂಬರಿಕಾರ ಪೂರೀಗಾಲಿ ಮರಡೇಶಮೂರ್ತಿ ಅವರು ಮೂಲತಃ ಮಂಡ್ಯದವರು. ವಚನ ಸಾಹಿತ್ಯದಲ್ಲಿ ತಮ್ಮೊಳಗಿನ ಅರಿವನ್ನು ಅಭಿವ್ಯಕ್ತಿಸಿದ್ದಾರೆ. ಕನ್ನಡ ಹಾಗೂ ಅರ್ಥಶಾಸ್ತ್ರದಲ್ಲಿ ಸ್ನಾತಕೋತ್ತರ ಪದವೀಧರರು. ’ಸಿಂಧೂರ ಬಿಂದು’ ಅವರ ಮೊದಲ ಕಾದಂಬರಿ. ಸುಮಾರು 3 ದಶಕಗಳ ಕಾಲ ಸಾಹಿತ್ಯ ಕೈಂಕರ್ಯ ನಡೆಸಿರುವ ಇವರು 50 ಕ್ಕೂ ಹೆಚ್ಚು ಕೃತಿಗಳನ್ನು ನೀಡಿದ್ದಾರೆ. ಮೈಸೂರು ರತ್ನ ಸಾಂಸ್ಕೃತಿಕ ಪ್ರತಿಷ್ಠಾನದಡಿ 25 ವರ್ಷಗಳಿಂದ ಯುವಪೀಳಿಗೆಗೆ ಸಾಹಿತ್ಯ ಕಾರ್ಯಕ್ರಮಗಳನ್ನು ವೈಚಾರಿಕ ನೆಲೆಗಟ್ಟಿನಲ್ಲಿ ನಡೆಸುತ್ತಾ ಬಂದಿದ್ದಾರೆ. ’ನೀಲಿಬಾನಿನ ತಾರೆಗಳು, ಹನಿಗಳು, ಕಾವ್ಯಕನ್ನಿಕೆ’ ಅವರ ಪ್ರಮುಖ ಕವನ ಸಂಕಲನಗಳು. ’ಒಲವಿನ ಕನಸು, ಅವಳು ಭೂಮಿಕೆ, ಸುಳಿ, ಸೂರ್ಯ ...
READ MORE